ಅಸ್ಮಿತೆ’ ವಸ್ತು ಪ್ರದರ್ಶನ, ಮಾರಾಟ ಮೇಳ ಉದ್ಘಾಟನೆ ಕಾರ್ಯಕ್ರಮ ಜ.27ಕ್ಕೆ

`ಅಸ್ಮಿತೆ’ ವಸ್ತು ಪ್ರದರ್ಶನ, ಮಾರಾಟ ಮೇಳ ಉದ್ಘಾಟನೆ ಕಾರ್ಯಕ್ರಮ ಜ.27ಕ್ಕೆ
ಕೊಪ್ಪಳ ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್ ಇವರ ಸಹಯೋಗದಲ್ಲಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2024ರ ಪ್ರಯುಕ್ತ ಜಾತ್ರಾ ಆವರಣದಲ್ಲಿ ಹಮ್ಮಿಕೊಳ್ಳಲಾದ `ಅಸ್ಮಿತೆ’ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಕಾರ್ಯಕ್ರಮವು ಜನವರಿ 27ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ .ಶರಣಪ್ರಕಾಶ ಆರ್ ಪಾಟೀಲ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭಾಗವಹಿಸುವರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾಮಹಾದೇವನ್, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್ ರಾಜ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಜಿ.ಪಂ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ ಅವರು ಉಪಸ್ಥಿತರಿರುವರು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ


