ಪತ್ರಿಕೋದ್ಯಮ

ಕನಕಗಿರಿಯಲ್ಲಿ ಐಟಿನರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ..

ಕನಕಗಿರಿಯಲ್ಲಿ ಐಟಿನರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

ಕನಕಗಿರಿ, ಜು.17: ಕನಕಗಿರಿಯಲ್ಲಿ ಹೊಸದಾಗಿ ಸ್ಥಾಪಿಸಲಾದ ಐಟಿನರಿ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭವು ಶುಕ್ರವಾರ ಬೆಳಿಗ್ಗೆ 9.30ಕ್ಕೆ ಕನಕಗಿರಿಯ ಎಪಿಎಂಸಿ ಆವರಣದಲ್ಲಿರುವ ಶ್ರಮಿಕ ಭವನದಲ್ಲಿ ನಡೆಯಲಿದೆ ಕಾರ್ಯಕ್ರಮ ವನ್ನು ನಾಡಗೀತೆ ಮುಖಾಂತರ ಆರಂಭ ಮಾಡಿದರು.

ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಮಾನ್ಯ ಶ್ರೀ ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ನಂತರ ಜ್ಯೋತಿ ಬೆಳಗಿಸಿ ಮತ್ತು ರಿಬ್ಬನ್ ಕಟ್ ಮಾಡುವ ಮೂಲಕ ಆರಂಭ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ್ ತಂಗಡಗಿ ವಹಿಸಲಿದ್ದು, ಅನಿವಾರ್ಯ ಕಾರಣಗಳಿಂದ ಅವರು ಕಾರ್ಯಕ್ರಮದಲ್ಲಿ ಭೌತಿಕವಾಗಿ ಭಾಗವಹಿಸಲು ಸಾಧ್ಯವಾಗದಿರುವುದಾಗಿ ತಿಳಿಸಿದ್ದು, ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಚಂದ್ರಶೇಖರ್ ಸಿ., ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಮಾಜಿ ಅಧ್ಯಕ್ಷರಾದ ಶ್ರೀ ಎನ್.ಎಸ್. ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಲ್ (ಐಎಎಸ್), ಕನಕಗಿರಿ ಎಪಿಎಂಸಿ ಕಾರ್ಯದರ್ಶಿ ಶ್ರೀಮತಿ ಸಾವಿತ್ರಿ ಹಾಗೂ ಕೆಆರ್‌ಐಡಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀ ಅನಿಲ್ ಪಾಟೀಲ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದರು.

ಕಾರ್ಯಕ್ರಮದ ಆಯೋಜನೆಯನ್ನು ಜಿಲ್ಲಾ ನ್ಯಾಯಾಂಗ, ಕೊಪ್ಪಳ ಹಾಗೂ ವಕೀಲರ ಸಂಘ, ಗಂಗಾವತಿ ಸಂಯುಕ್ತವಾಗಿ ನಡೆಸುತ್ತಿದ್ದು, ವಕೀಲರ ಸಂಘದ ಅಧ್ಯಕ್ಷ ಶರಣಬಸಪ್ಪ ಎನ್. ನಾಯಕ, ಪ್ರಧಾನ ಕಾರ್ಯದರ್ಶಿ ಎಚ್.ಎಂ. ಮಂಜುನಾಥ್, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಗಂಗಾವತಿ ವಕೀಲರ ಸಂಘದ ಸದಸ್ಯರು ಸಾರ್ವಜನಿಕರು, ವಕೀಲರು ಹಾಗೂ ಗಣ್ಯರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹೊಸ ನ್ಯಾಯಾಲಯ ಆರಂಭವಾಗುತ್ತಿರುವುದರಿಂದ ಕನಕಗಿರಿ ಹಾಗೂ ಸುತ್ತಮುತ್ತಲಿನ ಭಾಗದ ಸಾರ್ವಜನಿಕರಿಗೆ ನ್ಯಾಯಾಂಗ ಸೇವೆಗಳು ಮತ್ತಷ್ಟು ಸುಲಭವಾಗಿ ದೊರೆಯಲಿದ್ದು, ನ್ಯಾಯಾಂಗ ವ್ಯವಸ್ಥೆ ಜನಸಾಮಾನ್ಯರಿಗೆ ಇನ್ನಷ್ಟು ಸಮೀಪವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ ಎಂದು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಚಂದ್ರಶೇಖರ್ ಸಿ ಮಾತನಾಡಿದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ..

Related Articles

Leave a Reply

Your email address will not be published. Required fields are marked *

Back to top button