ಕನಕಗಿರಿ ಉತ್ಸವ: ಹ್ಯಾಂಡಬಾಲ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಕರ್ಷಕ.

ಕನಕಗಿರಿ ಉತ್ಸವ: ಹ್ಯಾಂಡಬಾಲ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಕರ್ಷಕ
ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಫೆಬ್ರವರಿ 28ರಂದು ಆಕರ್ಷಕ ಹ್ಯಾಂಡಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆದವು.
ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಹ್ಯಾಂಡಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಹಾರ ಇಲಾಖೆ ಉಪನಿರ್ದೇಶಕರಾದ ಚಿದಾನಂದ, ಉತ್ಸವದ ಕ್ರೀಡಾ ಸಮಿತಿ ಅಧ್ಯಕ್ಷರು ಆಗಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡ್ರ, ಕನಕಗಿರಿ ತಹಶೀಲ್ದಾರರಾದ ವಿಶ್ವನಾಥ ಮುರಡಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಶೇಖರ ಕಂದಕೂರ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ನೋಂದಾಯಿತ ತಂಡಗಳಿಂದ ಹ್ಯಾಂಡಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆದವು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳನ್ನು ವೀಕ್ಷಿಸಿದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




