ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅವರ ಕಾರ್ಯಶೈಲಿ.

ಕನಕಗಿರಿ: ಅಧಿಕಾರಿ , ಶಿಕ್ಷಕರಿಗೆ ನೋಟಿಸ್
ಕನಕಗಿರಿ: ಇಲ್ಲಿನ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇಯ ತರಗತಿ ವಿದ್ಯಾರ್ಥಿಯೊಬ್ಬ ಕುರಿ ಕಾಯುವ ಸಮಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅವರ ಪ್ರವಾಸ ಸಮಯದಲ್ಲಿ
ಆಕಸ್ಮಿಕವಾಗಿ ಗುರುತಿಸಿರುವ ಘಟನೆ ಹಾಗೂ ತಾಲ್ಲೂಕಿನ ಮುಸಲಾಪುರ ಗ್ರಾಮದ ಪರಿಶಿಷ್ಟ ಜಾತಿಯ ವಸತಿ ನಿಲಯದ ಅವ್ಯವಸ್ಥೆ ಮತ್ತು ನಿಲಯ ಪಾಲಕನ ಗೈರು ಹಾಜರಿಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಅಧಿಕಾರಿಗಳು ನೋಟಿಸ್ ಜಾರಿಗೆ ಮಾಡಿದ್ದಾರೆ.
ಎಂಎಚ್ ಪಿಎಸ್
ಶಾಲೆಗೆ ಗೈರು ಆದ ವಿದ್ಯಾರ್ಥಿಯ ಹಾಜರಾತಿಯನ್ನು ಹಾಜರಾತಿ ಪುಸ್ತಕದಲ್ಲಿ ಹಾಜರು ಹಾಕಿರುವುದು ಮೇಲ್ನೋಟಕ್ಕೆ ಬೇಜವಾಬ್ದಾರಿ ಎಂದು ಕಂಡು ಬಂದಿದೆ ಎಂದು ಪ್ರಭಾರ ಮುಖ್ಯಶಿಕ್ಷಕ ಸಂಗಮೇಶ ಹಿರೇಮಠ ಹಾಗೂ ಸಹ ಶಿಕ್ಷಕ ಧನಂಜಯ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ಅವರು
ಮಂಗಳವಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದ್ದು ವಾರದೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮುಸಲಾಪುರ ಗ್ರಾಮದ ವಸತಿ ನಿಲಯದ ನಿಲಯ ಪಾಲಕರು ಐದು ದಿನಗಳಿಂದ ಅನಧಿಕೃತ ರಜೆ ಹಾಕಿದ್ದಾರೆ, ಅಡುಗೆ ಕಳಪೆ ಗುಣಮಟ್ಟದಿಂದ ಕೂಡಿದೆ, ವಸತಿ ನಿಲಯದಲ್ಲಿ ರಾತ್ರಿ ವೇಳೆಯಲ್ಲಿ ಕಾವಲುಗಾರರು, ಅಡುಗೆಯವರು ಹಾಗೂ ನಿಲಯ ಪಾಲಕರು ಇರುವುದಿಲ್ಲ, ಅಡುಗೆಯಲ್ಲಿ ಸ್ವಚ್ಚತೆ ಇರುವುದಿಲ್ಲ ಎಂದು ಪ್ರಸ್ತಾಪಿಸಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಅವರಿಗೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರವಿ ತಳವಾರ ಅವರು
ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



