ರಾಜ್ಯ

ಜಿಲ್ಲಾಡಳಿತದಿಂದ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ: ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ

ಜಿಲ್ಲಾಡಳಿತದಿಂದ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ: ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ

ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನವೆಂಬರ್ 30 ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಹೇಳಿದರು.
ಸೋಮವಾರದಂದು ಜಿಲ್ಲಾಡಳಿತ ಭವನದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನವೆಂಬರ್ 30 ರಂದು ಆಚರಿಸಲಾಗುವ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನ.30 ರಂದು ನಗರದ ಸಾಹಿತ್ಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಅಂದು ಜಿಲ್ಲಾಡಳಿತದೊಂದಿಗೆ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಕಚೇರಿ ಹಾಗೂ ತಮ್ಮ ಅಧಿನ ಕಚೇರಿಗಳಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು. ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲೆಯ ಎಲ್ಲ ಶಾಲಾ/ಕಾಲೇಜುಗಳಲ್ಲಿ ಹಾಗೂ ಹಾಸ್ಟೆಲ್‌ಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ, ಕಲ್ಯಾಣ ಕರ್ನಾಟಕ ಸಾರಿಗೆ ಘಟಕಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜ ಮುಖಂಡರ ಸಲಹೆಯಂತೆ ಕನಕ ದಾಸರ ಕುರಿತು ಹೊಸಪೇಟೆಯ ಶ್ರೀ ಶಂಕರ್ ಆನಂದ್‌ಸಿAಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರು ಹಾಗೂ ವಿಮರ್ಶಕರಾದ ಡಾ. ನಾಗಣ್ಣ ಕಿಲಾರಿ ಅವರು ಉಪನ್ಯಾಸ ನೀಡುವರು. ವೇದಿಕೆ ಅಲಂಕಾರ, ವೇದಿಕೆ ಮೇಲಿನ ಗಣ್ಯರಿಗೆ ಪುಸ್ತಕ ವಿತರಣೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಕ್ರಮ ಕೈಗೊಳ್ಳಬೇಕು. ಸಾಹಿತ್ಯ ಭವನದ ಸ್ವಚ್ಛತೆ, ನೈರ್ಮಲೀಕರಣ, ವೇದಿಕೆ ಮೇಲಿನ ಗಣ್ಯರಿಗೆ, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಆಯೋಜಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಠಾಚಾರದಂತೆ ಗಣ್ಯರನ್ನು, ಸಮಾಜದ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು.
ಸಂಬಂಧಿಸಿದ ಅಧಿಕಾರಿಗಳು ಕಾರ್ಯಕ್ರಮವನ್ನು ಶಿಷ್ಠಾಚಾರ ಪಾಲನೆ ಜೊತೆಗೆ ಸುವ್ಯವಸ್ಥಿತವಾಗಿ ನಡೆಯುವಂತೆ ಅಗತ್ಯ ಏರ್ಪಾಡು ಮಾಡಬೇಕು. ಕನಕದಾಸ ಜಯಂತಿಯಲ್ಲಿ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಭೆಯ ಮೂಲಕ ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ,
ಪ್ರಾವಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ ಡೊಂಕಯ್ಯನವರ,
ಸಮಾಜದ ಮುಖಂಡರಾದ ಬಸವರಾಜ ಹಿಟ್ನಾಳ, ಜಂಬಣ್ಣ ನಾದ್ಯಪುರ, ಕುಮಾರ ಎಚ್. ಕುಬೇರ ಮಜ್ಜಿಗಿ, ಹನುಮಂತಪ್ಪ ಕೌದಿ, ಸುರೇಶ್ ಎಚ್.ಮಜ್ಜಿಗಿ, ಮಹೇಂದ್ರಗೌಡ ದೇವೇಂದ್ರಗೌಡ,
ಅಂದಾನಸ್ವಾಮಿ, ಹನುಮಂತ ನಾಯ್ಕ, ದ್ಯಾಮಣ್ಣ, ಮುತ್ತುರಾಜ ಹಾಲವರ್ತಿ, ಸುಧಾ ಯು. ಹಾಗೂ ಹಲವು ಗಣ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button