ಪತ್ರಿಕೋದ್ಯಮ

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಉಪ ವಿಭಾಗಾಧಿಕಾರಿ ನ್ಯಾಮನಗೌಡ.

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಉಪ ವಿಭಾಗಾಧಿಕಾರಿ ನ್ಯಾಮನಗೌಡ

ಕನಕಗಿರಿ, ಆ. 4: ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ, ಮಟ್ಕಾ, ಇಸ್ಪೀಟ್ ಆಟ, ಕುರಿ ಹಾಗೂ ಹಂದಿ ಕಳ್ಳತನ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕಲಾಗುವುದು ಎಂದು ಗಂಗಾವತಿ ಉಪ ವಿಭಾಗದ ಪೊಲೀಸ್ ಉಪ ವಿಭಾಗಾಧಿಕಾರಿ (ಡಿವೈಎಸ್‌ಪಿ) ನ್ಯಾಮನಗೌಡ ಎಚ್ಚರಿಕೆ ನೀಡಿದರು.

ಮಂಗಳವಾರ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಂಪೂರ್ಣ ಬದ್ಧವಾಗಿದೆ. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ಸಂಬಂಧ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದ್ದು, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕನಕಗಿರಿ ಪೊಲೀಸ್ ಠಾಣೆಯ ಪಿಐ ವಿ. ನಾರಾಯಣ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button