ರಾಜ್ಯ

ಅಖಿಲ ಕರ್ನಾಟಕ ಗಾಣಿಗರ ಸಂಘಕ್ಕೆ ಸುವರ್ಣ ಸಂಭ್ರಮ

ಅಖಿಲ ಕರ್ನಾಟಕ ಗಾಣಿಗರ ಸಂಘಕ್ಕೆ ಸುವರ್ಣ ಸಂಭ್ರಮ

ಬೆಂಗಳೂರು. ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಸಂಘದ ಕಟ್ಟಡವನ್ನು ಉದ್ಘಾಟಿಸಲಾಗುವುದು ಎಂದು ಡಿ. 2ರಂದು ನಗರದ ಅವಲಹಳ್ಳಿಯ ಅಂಜನಾಪುರದಲ್ಲಿ .ಬೆ 10 ಗಂಟೆಗೆ ಅಖಿಲ ಕರ್ನಾಟಕ ಗಾಣಿಗರ ಸಂಘದ ಸುವರ್ಣ ಮಹೋತ್ಸವ ಸಮಾರಂಭ ಹಮ್ಮಿಕೊಂಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಂ ಆರ್ ರಾಜಶೇಖರ್ ಎಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲ ತಿಳಿಸಿದರು

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, ಗಾಣಿಗ ಸಮುದಾಯವನ್ನು ರಾಜಕೀಯ ಶೈಕ್ಷಣಿಕ ಸಾಮಾಜಿಕವಾಗಿ ಮೇಲೆತ್ತಲು ಹುಟ್ಟಿಕೊಂಡ ಅಖಿಲ ಕರ್ನಾಟಕ ಗಾಣಿಗರ ಸಂಘ 50 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಸಂಘದ ಕಟ್ಟಡವನ್ನು ಉದ್ಘಾಟಿಸಲಾಗುವುದು ಎಂದರು
ಶ್ರೀ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿಯವರ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಸಚಿವರಾದ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಭೈರ ಗೌಡ, ಸಚಿವ ತಂಗಡಗಿ ಶಿವರಾಜ ಸಂಗಪ್ಪ ರವರು ಸೇರಿದಂತೆ ಅನೇಕ ರಾಜಕೀಯ ಧುರುಣಿಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 10 ಜಿಲ್ಲೆಗಳಿಂದ 10,000 ಗಾಣಿಗ ಸಮುದಾಯದ ಜನ ಭಾಗವಹಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ನಮ್ಮ ಸಂಖ್ಯೆ ಐದು ಆರು ಲಕ್ಷಕ್ಕಿಂತ ಕಡಿಮೆ ಇದ್ದು, ಎಲ್ಲಾ ಕ್ಷೇತ್ರಗಳಲ್ಲೂ ಹಿಂದುಳಿದಿದ್ದೇವೆ ಇದಕ್ಕೆ ಕಾರಣ ಕಡಿಮೆ ಜನಸಂಖ್ಯೆ. ಎಲ್ಲಾ ರಾಜಕೀಯ ಪಕ್ಷಗಳು ನಮ್ಮ ಅಭಿವೃದ್ಧಿಗೆ ಶ್ರಮಿಸದೆ ಮೋಸ ಮಾಡಿವೆ. ಇವೆಲ್ಲವನ್ನು ಮನದಲ್ಲಿಟ್ಟುಕೊಂಡ ಸಂಘ ಮುಂದಿನ ದಿನಗಳಲ್ಲಿ ಉಪ ಪಂಗಡಗಳಾಗಿ ಬದಲಾಗಿರುವ ನಮ್ಮ ಗಾಣಿಗ ಸಮಾಜವನ್ನು ಒಗ್ಗೂಡಿಸಿ ಅರಿವು ಮೂಡಿಸಲಾಗುವುದು. ನಾವು ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಬರಲು ಶ್ರಮಿಸಲಾಗುವುದು. ಈ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಈಗಾಗಲೇ ಸ್ಥಾಪನೆಯಾಗಿರುವ ಗಾಣಿಗ ಅಭಿವೃದ್ಧಿ ನಿಗಮವನ್ನು ಅನುಷ್ಠಾನಗೊಳಿಸಿಲು ಮುಖ್ಯಮಂತ್ರಿಗಳನ್ನು ಕೋರಲಾಗುವುದು ಹಾಗೂ ಉಪಕಸಬುಗಳ ಪಟ್ಟಿಯಲ್ಲಿ ಗಾಣ ವೃತ್ತಿಯನ್ನು ಕೈ ಬಿಟ್ಟಿರುವ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮುದಾಯದ ಹಿರಿಯ ಮುಖಂಡ ಷಣ್ಮುಗಂ, ಉಪಾಧ್ಯಕ್ಷ ಮಲ್ಲೇಶ್, ಸಂಘಟನಾ ಕಾರ್ಯದರ್ಶಿ ನಟರಾಜ್, ಉಪಾಧ್ಯಕ್ಷ ಮಲ್ಲೇಶ್, ಕೆ ಎಮ್ ಶೇಖರ್ ಮುಂತಾದವರು ಉಪಸ್ಥಿತರಿದ್ದರು. ವರದಿ. ಮಂಜುಳಾ ರೆಡ್ಡಿ.

Related Articles

Leave a Reply

Your email address will not be published. Required fields are marked *

Back to top button