ಸುದ್ಧಿ

ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿಷೇಧ ಹಿಂಪಡೆದ ಕೇಂದ್ರ

ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿಷೇಧ ಹಿಂಪಡೆದ ಕೇಂದ್ರ

ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿಷೇಧ ಹಿಂಪಡೆದ ಕೇಂದ್ರ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಕೇಂದ್ರವು ತೆಗೆದುಹಾಕಿದೆ.

ನವೆಂಬರ್ 1966 ರಲ್ಲಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಆಳ್ವಿಕೆಯಲ್ಲಿ ವಿಧಿಸಲಾದ ನಿಷೇಧವನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ತೆಗೆದುಹಾಕಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು, 58 ವರ್ಷಗಳ ಹಿಂದೆ 1966 ರಲ್ಲಿ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಅಸಂವಿಧಾನಿಕ ಆದೇಶವನ್ನು ಹೊರಡಿಸಲಾಗಿತ್ತು. ಇಂದು ಮೋದಿ ಸರ್ಕಾರ ಈ ನಿಷೇಧವನ್ನು ಹಿಂಪಡೆದಿದೆ ಎಂದು ಹೇಳಿದರು.

ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಹಲವಾರು ರಾಜ್ಯ ಸರ್ಕಾರಗಳು ಈಗಾಗಲೇ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ಗೆ ಸಂಬಂಧಿಸಿರುವ ನಿರ್ಬಂಧಗಳನ್ನು ತೆಗೆದುಹಾಕಿವೆ.

Related Articles

Leave a Reply

Your email address will not be published. Required fields are marked *

Back to top button