ಸಂಪಾದಕೀಯ

ಇಂದಿರಾನಗರದಲ್ಲಿ ನಾಯಿಗಳ ಹಾವಳಿ: ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಇಂದಿರಾನಗರದಲ್ಲಿ ನಾಯಿಗಳ ಹಾವಳಿ: ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಕನಕಗಿರಿ: ಪಟ್ಟಣದ ಐದನೇ ವಾರ್ಡ್‌ನ ಇಂದಿರಾನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಬೀದಿ ನಾಯಿಗಳಿಂದ ತೊಂದರೆ ಉಂಟಾಗುತ್ತಿದ್ದು, ವಾಹನಗಳ ಹಿಂದೆ ಓಡುವ ಘಟನೆಗಳು ಹೆಚ್ಚಾಗಿವೆ. ಇದರಿಂದ ಅಪಘಾತ ಸಂಭವಿಸುವ ಭೀತಿ ಎದುರಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಸಮಸ್ಯೆಯಿಂದ ಮಕ್ಕಳು, ಮಹಿಳೆಯರು ಹಾಗೂ ವಯೋವೃದ್ಧರು ರಸ್ತೆಯಲ್ಲಿ ಓಡಾಡಲು ಭಯಪಡುವಂತಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿಗಾರ ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ 8867257737

Related Articles

Leave a Reply

Your email address will not be published. Required fields are marked *

Back to top button