ರಾಜಕೀಯ
ಎಚ್.ಜಿ. ರಾಮುಲು ನಿವಾಸಕ್ಕೆ ಎಐಸಿಸಿ ವೀಕ್ಷಕ ವಿವೇಕ್ ಬನ್ಸಾಲ್ ಭೇಟಿ..

ಎಚ್.ಜಿ. ರಾಮುಲು ನಿವಾಸಕ್ಕೆ ಎಐಸಿಸಿ ವೀಕ್ಷಕ ವಿವೇಕ್ ಬನ್ಸಾಲ್ ಭೇಟಿ
ಗಂಗಾವತಿ, ಆ. 4: ಎಐಸಿಸಿ ವೀಕ್ಷಕರಾದ ವಿವೇಕ್ ಬನ್ಸಾಲ್ ಅವರು ಇಂದು ಮಾಜಿ ಲೋಕಸಭಾ ಸದಸ್ಯ ಎಚ್.ಜಿ. ರಾಮುಲು ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು.
ಭೇಟಿಯ ವೇಳೆ ರಾಜ್ಯ ಹಾಗೂ ಕ್ಷೇತ್ರದ ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್, ಓಬಿಸಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜಶೇಖರ್ ಮುಷ್ಟೂರು ಹಾಗೂ ಮುಖಂಡ ರಮೇಶ್ ಗೌಳಿ ಉಪಸ್ಥಿತರಿದ್ದು, ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಭೇಟಿಯು ಆತ್ಮೀಯ ವಾತಾವರಣದಲ್ಲಿ ನಡೆಯಿತು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




