ಕನಕಗಿರಿ ಉತ್ಸವ ಮಾಧ್ಯಮ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಓ, ಎಸ್ಪಿ ಭೇಟಿ.

ಕನಕಗಿರಿ ಉತ್ಸವ ಮಾಧ್ಯಮ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಓ, ಎಸ್ಪಿ ಭೇಟಿ
ಕೊಪ್ಪಳ ಮಾರ್ಚ್ 03 (ಕರ್ನಾಟಕ ವಾರ್ತೆ): ಕನಕಗಿರಿ ಉತ್ಸವ-24ರ ಹಿನ್ನೆಲೆಯಲ್ಲಿ ಮುಖ್ಯ ವೇದಿಕೆಯ ಬಳಿ ನಿರ್ಮಿಸಲಾಗಿದ್ದ ಮಾಧ್ಯಮ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾರ್ಚ್ 3ರಂದು ಭೇಟಿ ನೀಡಿದರು.
ಮಾಧ್ಯಮ ಕೇಂದ್ರದಲ್ಲಿ ಕಾರ್ಯನಿರತರಾಗಿದ್ದ ಪತ್ರಕರ್ತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು, ಪತ್ರಕರ್ತರ ಕಾರ್ಯವೈಖರಿ, ಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕನಕಗಿರಿ ಉತ್ಸವಕ್ಕೆ ಅತ್ಯುತ್ತಮವಾಗಿ ಪ್ರಚಾರ ನೀಡಿದ ಎಲ್ಲ ಪತ್ರಕರ್ತರ ಸಹಕಾರ ಮತ್ತು ಶ್ರಮಕ್ಕೆ ತಾವು ಅಭಿನಂದನೆ ಸಲ್ಲಿಸುವುದಾಗಿ ಇದೆ ವೇಳೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಇದೆ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ
ಅವರು ಸಹ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ಪರ್ತಕರ್ತರೊಂದಿಗೆ ಆತ್ಮೀಯವಾಗಿ ಮಾತನಾಡಿ ಪತ್ರಕರ್ತರ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೊಡಿ ಅವರು ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ, ಮಾಧ್ಯಮ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಉತ್ಸವಕ್ಕೆ ಮಾಧ್ಯಮ ಪ್ರತಿನಿಧಿಗಳಿಂದ ಉತ್ತಮವಾಗಿ ಪ್ರಚಾರವಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಅವರು, ಮಾಧ್ಯಮ ಕೇಂದ್ರದಲ್ಲಿದ್ದ ವಿವಿಧ ಪತ್ರಿಕೆಗಳ ಮತ್ತು ಸುದ್ದಿವಾಹಿನಿಗಳ ಪರಿಚಯ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾವಚಿತ್ರ ಪಡೆದರು: ಮಾರ್ಚ್ 2ರಿಂದ ಮಾರ್ಚ್ 3ರವರೆಗೆ ಎರಡು ದಿನಗಳ ಕಾಲ ಮಾಧ್ಯಮ ಕೇಂದ್ರದಲ್ಲಿ ಉತ್ಸಾಹದಿಂದ ಕೆಲಸ ಮಾಡಿದ ಪತ್ರಕರ್ತರು ಇದೆ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ಗ್ರೂಪ್ ಫೋಟೊ ತೆಗೆಯಿಸಿಕೊಂಡರು.
ಈ ಸಂದರ್ಭದಲ್ಲಿ ವಿವಿಧ ಪತ್ರಿಕೆಗಳ ಮತ್ತು ವಿದ್ಯುನ್ಮಾನ ವಾಹಿನಿಯ ಪ್ರತಿನಿಧಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಇದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



