ಕನಕಗಿರಿ ಉತ್ಸವ-2024 ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ

ಕನಕಗಿರಿ ಉತ್ಸವ-2024 ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ
ಕನಕಗಿರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಫೆ.17ರಂದು ಕನಕಗಿರಿಯಲ್ಲಿ ಕನಕಗಿರಿ ಉತ್ಸವ-2024ರ ಹಿನ್ನೆಲೆಯಲ್ಲಿ ಸಿದ್ಧತೆಯನ್ನು ಪರಿಶೀಲಿಸಿದರು.
ಪೂರ್ವ ನಿಗದಿಯಂತೆ ಬೆಳಗ್ಗೆ ಕೊಪ್ಪಳದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಲ್ಲಿಂದ ಹಾಲವರ್ತಿಗೆ ಭೇಟಿ ನೀಡಿ ಬಳಿಕ ಕನಕಗಿರಿಗೆ ತೆರಳಿದ ಸಚಿವರು, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರೊಂದಿಗೆ ಕನಕಗಿರಿ ಪಟ್ಟಣದ ವಿವಿಧೆಡೆ ಸಂಚರಿಸಿ ಉತ್ಸವದ ಸಿದ್ಧತೆಯ ರೂಪುರೇಷಗಳ ಬಗ್ಗೆ ಮಾಹಿತಿ ಪಡೆದರು.
ಮೊದಲಿಗೆ ಕನಕಗಿರಿ ಉತ್ಸವದ ಪ್ರಮುಖ ಉಡಚಪ ನಾಯಕ ವೇದಿಕೆಯ ಹತ್ತಿರ ತೆರಳಿ ಪರಿಶೀಲಿಸಿದರು. ಬಳಿಕ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ತೆರಳಿ ದೇವಸ್ಥಾನಕ್ಕೆ ವಿದ್ಯುತ್ ಅಲಂಕಾರಕ್ಕೆ ವ್ಯವಸ್ಥೆ ಮಾಡಿಸಲು ಸೂಚನೆ ನೀಡಿದರು. ಹೆಲಿಪ್ಯಾಡ್ ಸ್ಥಳ ಸೇರಿದಂತೆ ಇನ್ನೀತರ ಕಡೆ ತೆರಳಿ ಪರಿಶೀಲಿಸಿದರು.
ಅಧಿಕಾರಿಗಳಿಗೆ ಸೂಚನೆ: ಉಡಚಪ ನಾಯಕ ವೇದಿಕೆ ಸಿದ್ಧತೆಯ ಕಾರ್ಯ ಸೇರಿದಂತೆ ಎಲ್ಲಾ ಕಾರ್ಯಗಳು ಯುದ್ಧೋಪಾದಿಯಲ್ಲಿ ಆರಂಭವಾಗಿ ನಿಗದಿತ ಕಾಲಾವಧಿಯೊಳಗೆ ಪೂರ್ಣವಾಗಬೇಕು. ಸಬ್ಧಚಿತ್ರಗಳ ಮೆರೆವಣಿಗೆ, ಶ್ರೀ ಕನಕಾಚಲಪತಿ ಇತಿಹಾಸದ ಕುರಿತು ನಾಟಕ ಪ್ರದರ್ಶನ, ಡ್ರೋನ್ ಲೇಸರ್ ವಿಶೇಷ ಕಾರ್ಯಕ್ರಮ, ಕೃಷಿ ಮೇಳ, ಫಲಪುಷ್ಪ ಪ್ರದರ್ಶನ ಸೇರಿದಂತೆ ನಾನಾ ಕಾರ್ಯಕ್ರಮಗಳಿಗೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಬೇಕು.
ಫೆ.27 ರಂದು ನಿಗದಿಪಡಿಸಿದ ಕ್ರಿಕೆಟ್ ಪಂದ್ಯ, ಫೆ.28ರಂದು ಮತ್ತು 29 ರಂದು ನಿಗದಿಪಡಿಸಿದ ಕಬಡ್ಡಿ, ವಾಲಿಬಾಲ್, ಕುಸ್ತಿ, ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ, ಮಾರ್ಚ 1 ರಂದು ಮ್ಯಾರಥಾನ್, ಮಾರ್ಚ 2 ರಂದು ಕಲಾ ತಂಡಗಳಿAದ ಶ್ರೀಕನಕಾಚಲಪತಿ ಮೂರ್ತಿ ಮೆರವಣಿಗೆ ಸೇರಿದಂತೆ ಈ ಎಲ್ಲಾ ಕಾರ್ಯಕ್ರಮಗಳಿಗೆ ಅಚ್ಚುಕಟ್ಟಾಗಿ ತಯಾರಿ ಮಾಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳೊಂದಿಗೆ ಚರ್ಚೆ: ರೈತರ ಬಂಡಿ ಉತ್ಸವ, ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸುವುದರ ಬಗ್ಗೆ, ಉತ್ಸವಕ್ಕೆ ಆಗಮಿಸಲು ಜನರಿಗೆ ಅನುಕೂಲವಾಗುವಂತೆ ಬಸ್‌ಗಳನ್ನು ಉಚಿತವಾಗಿ ಬಿಡುವ ಬಗ್ಗೆ, ಸಾರ್ವಜನಿಕರಿಗೆ ಊಟದ ವ್ಯವಸ್ಥೆ, ಉತ್ಸವದಲ್ಲಿ ಪುಸ್ತಕ ಮಳಿಗೆ ಹಾಕುವ ಬಗ್ಗೆ, ವಿಶೇಷ ಉಪನ್ಯಾಸ ಏರ್ಪಡಿಸುವ ಬಗ್ಗೆ, ಸಾಹಿತಿಗಳು ಚಿಂತಕರನ್ನು ಆಹ್ವಾನಿಸುವುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸ್ಥಳದಲ್ಲಿ ಸಚಿವರು ಚರ್ಚಿಸಿದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಂದ ಉತ್ಸವಕ್ಕೆ ಚಾಲನೆ ಸಿಗಲಿದ್ದು ಶಿಷ್ಠಾಚಾರದಂತೆ ಕಾರ್ಯಕ್ರಮ ಆಯೋಜನೆಯಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತಹಶೀಲ್ದಾರ್ ವಿಶ್ವನಾಥ ಮುರುಡಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಪ.ಪಂ ಅಧಿಕಾರಿ ದತ್ತಾತೈಯ ಹೆಗಡೆ, ಪಟ್ಟಣ ಪಂಚಾಯತ್ ಸದಸ್ಯರಾದ ಅಭಿಷೇಕ ಕಲ್ಲಬಾಗಿಲಮಠ, ರಾಕೇಶ ಕಂಪ್ಲಿ, ಶರಣೇಗೌಡ, ಮುಖಂಡರಾದ ಕೆ.ಗಂಗಾಧರಸ್ವಾಮಿ, ರಮೇಶ್ ನಾಯಕ್, ಶರಣಪ್ಪ ಭಕ್ತದ್, ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಈ ವೇಳೆ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತಹಶೀಲ್ದಾರ್ ವಿಶ್ವನಾಥ ಮುರುಡಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಪ.ಪಂ ಅಧಿಕಾರಿ ದತ್ತಾತೈಯ ಹೆಗಡೆ, ಪಟ್ಟಣ ಪಂಚಾಯತ್ ಸದಸ್ಯರಾದ ಅಭಿಷೇಕ ಕಲ್ಲಬಾಗಿಲಮಠ, ರಾಕೇಶ ಕಂಪ್ಲಿ, ಶರಣೇಗೌಡ, ಮುಖಂಡರಾದ ಕೆ.ಗಂಗಾಧರಸ್ವಾಮಿ, ರಮೇಶ್ ನಾಯಕ್, ಶರಣಪ್ಪ ಭಕ್ತದ್, ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




