ಕನಕಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕನಕಗಿರಿ: ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು
ಕನಕಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
ಕನಕಗಿರಿ: ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ತಹಶೀಲ್ದಾರ್ ಚಂದ್ರಶೇಖರ್ ಗಾಳಿ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ನಾಗೇಶ್ ಚಿಕ್ಕ ಡಂಕನಕಲ್ ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ನಾಗೇಶ್ ಚಿಕ್ಕ ಡಂಕನಕಲ್, ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅಸಮಾನತೆ, ಮೂಢನಂಬಿಕೆ ಹಾಗೂ ಜಾತಿ ಭೇದಭಾವದ ವಿರುದ್ಧ ಹೋರಾಡಿ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರಿದರು. ಅವರ “ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು” ಎಂಬ ತತ್ವವು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.
ಪದಾಧಿಕಾರಿಗಳಾದ ಮಂಗಳೇಶ್, ರಮೇಶ್ ಹಾಗೂ ವೀರನಗೌಡ ಅವರು ಮಾತನಾಡಿ, ನಾರಾಯಣ ಗುರುಗಳ ತತ್ವ, ಸಿದ್ಧಾಂತ ಮತ್ತು ಸಮಾಜ ಸುಧಾರಣೆಯ ಕಾರ್ಯಗಳನ್ನು ಪ್ರತಿಯೊಬ್ಬರೂ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಸಮಾಜದ ಪದಾಧಿಕಾರಿಗಳಾದ ಚಂದ್ರಶೇಖರ್, ಮಂಗಳೇಶ್, ರಮೇಶ್, ಹನುಮಂತ, ವೀರನಗೌಡ, ನಾಗರಾಜ್, ಅನಿಲ್, ಶಾಮಣ್ಣ ಹಾಗೂ ಬಸವರಾಜ್ ಸೇರಿದಂತೆ ಸಮಾಜದ ಮುಖಂಡರು ಮತ್ತು ಸಿಬ್ಬಂದಿಗಳ ಸದಸ್ಯರು ಉಪಸ್ಥಿತರಿದ್ದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ :8867257737



