ಸಂಪಾದಕೀಯ

ಕನಕಗಿರಿ ತಾಲೂಕಿನಲ್ಲಿ ಅಕ್ರಮ ಗೋ ಸಾಗಾಣಿಕೆ ಆರೋಪ: ವಾಹನ ವಶಕ್ಕೆ, ಗೋವುಗಳನ್ನು ಗೋಶಾಲೆಗೆ.

ಕನಕಗಿರಿ ತಾಲೂಕಿನಲ್ಲಿ ಅಕ್ರಮ ಗೋ ಸಾಗಾಣಿಕೆ ಆರೋಪ: ವಾಹನ ವಶಕ್ಕೆ, ಗೋವುಗಳನ್ನು ಗೋಶಾಲೆಗೆ ರವಾನೆ

ಕನಕಗಿರಿ: ಕನಕಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗೋ ಸಾಗಾಣಿಕೆ ನಡೆಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ಆರ್‌ಎಸ್‌ಎಸ್ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರು KA-36 B 2057 ಹಾಗು KA 36 C 0891 ಸಂಖ್ಯೆಯ ವಾಹನವಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಬಳಿಕ ವಾಹನದಲ್ಲಿದ್ದ ಗೋವುಗಳನ್ನು ಸುರಕ್ಷಿತವಾಗಿ ಆನೆಗೊಂದಿಯ ದುರ್ಗಾದೇವಿ ಗೋಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಅಕ್ರಮ ಗೋ ಸಾಗಾಣಿಕೆ ನಡೆದಿದೆಯೇ ಎಂಬುದರ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಸ್ಪಷ್ಟವಾಗಲಿದೆ ಎಂದು ಪಿಐ ವಿ ನಾರಾಯಣ ಅವರು ಸ್ಪಷ್ಟೀಕರಣ ನೀಡಿದ್ದಾರೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button