ಸಂಪಾದಕೀಯ

ಕನಕಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ.

ಕನಕಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಕನಕಗಿರಿ, ಜು. 25: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ವಿವಿಧ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಶನಿವಾರ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪನ್ಯಾಸಕರಾದ ಶ್ರೀ ಶಿವಪುತ್ರಪ್ಪ ಗಳಪೂಜಿಯವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಆದಪ್ಪ ಪಿ, ಸಮಾಜಶಾಸ್ತ್ರ ಉಪನ್ಯಾಸಕರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕೇಸರಹಟ್ಟಿ ಹಾಗೂ ಶ್ರೀ ಸೋಮಶೇಖರ ಗೌಡ, ಅಧ್ಯಕ್ಷರು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಜಿಲ್ಲಾ ಘಟಕ, ಕೊಪ್ಪಳ ಅವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

ಅತಿಥಿಗಳು ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಸಹಪಠ್ಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ರೇಖಾ ಚಕ್ರಸಾಲಿ, ಪಂಪಾರೆಡ್ಡಿ ಗಚ್ಚಿನಮನಿ, ಅತಿಥಿ ಉಪನ್ಯಾಸಕರಾದ ಹನುಮೇಶ ಗೌಡ್ರ, ಶಿವಶರಣಪ್ಪ ಗದ್ದಿ, ಸಂಗೀತ, ವಸಂತ, ಹನುಮಂತ, ಹನುಮೇಶ ದೇಸಾಯಿ, ಹೊನ್ನೂರಪ್ಪ, ಮಹೇಶ್, ಖೈರುನ್ನೀಸಾ, ವಿಜಯಲಕ್ಷ್ಮಿ, ಶಾಂತ, ಕಿರಣ್, ಮಂಜುನಾಥ್, ಶಂಕ್ರಗೌಡ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಶೈಕ್ಷಣಿಕ ವರ್ಷದ ಉತ್ಸಾಹವನ್ನು ಹೆಚ್ಚಿಸುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಗೆ ಪ್ರೇರಣೆ ನೀಡಿತು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ 8867257737

Related Articles

Leave a Reply

Your email address will not be published. Required fields are marked *

Back to top button