ಕುಮಾರ ರಾಮನ ಕಮ್ಮಟ ದುರ್ಗದಲ್ಲಿ ಸ್ವಚ್ಛತಾ ಶ್ರಮದಾನ ಐತಿಹ್ಯಗಳು ಗತಕಾಲದ ವೈಭವಕ್ಕೆ ಸಾಕ್ಷಿ: ಜಿಲ್ಲಾಧಿಕಾರಿ ನಲಿನ್ ಅತುಲ್ ಬಣ್ಣನೆ

ಕುಮಾರ ರಾಮನ ಕಮ್ಮಟ ದುರ್ಗದಲ್ಲಿ ಸ್ವಚ್ಛತಾ ಶ್ರಮದಾನ
ಐತಿಹ್ಯಗಳು ಗತಕಾಲದ ವೈಭವಕ್ಕೆ ಸಾಕ್ಷಿ: ಜಿಲ್ಲಾಧಿಕಾರಿ ನಲಿನ್ ಅತುಲ್ ಬಣ್ಣನೆ
ಕೊಪ್ಪಳ ಜಿಲ್ಲಾ ಗಂಗಾವತಿಯ ತಾಲೂಕಿನ ಕುಮಾರ ರಾಮನ ಕಮ್ಮಟ ದುರ್ಗ ಸೇರಿ ಪುರಾತನ ಐತಿಹ್ಯಗಳು ಹಿಂದಿನ ಗತಕಾಲದ ವೈಭವಕ್ಕೆ ಸಾಕ್ಷಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಬಣ್ಣಿಸಿದರು.
ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಜಬ್ಬಲಗುಡ್ಡ ಗ್ರಾಮದ ಬಳಿಯಿರುವ ಕುಮಾರರಾಮ ಗುಡ್ಡದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕ ಪಂಚಾಯತಿ ಕೊಪ್ಪಳ ಹಾಗೂ ಗ್ರಾಮ ಪಂಚಾಯತಿ ಬೂದಗುಂಪಾ ವತಿಯಿಂದ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆ ಮತ್ತು ಸ್ವಚ್ಛತಾ ಅಭಿಯಾನದ ಅಂಗವಾಗಿ ಜಬ್ಬಲಗುಡ್ಡ ಗ್ರಾಮದ ಹತ್ತಿರ ಜರುಗಿದ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಐತಿಹಾಸಿಕ ಸ್ಥಳಗಳನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಅವುಗಳಲ್ಲಿ ಸ್ವಚ್ಛತೆ ಕಾಪಾಡುವುದು ಕೂಡ ಅಷ್ಟೇ ಮುಖ್ಯ. ಪ್ಲಾಸ್ಟಿಕ್ ಬಳಕೆಯಿಂದ ಐತಿಹಾಸಿಕ ಸ್ಥಳಗಳಿಗೆ ಧಕ್ಕೆಯಾಗದಂತೆ ಸುರಕ್ಷಾ ಕ್ರಮಗಳನ್ನು ಅವಶ್ಯವಾಗಿ ಅಳವಡಿಸಬೇಕು. ಸಾಧ್ಯವಾದಷ್ಟು ನಾವುಗಳು ಪ್ಲಾಸ್ಟಿಕ್, ಪೇಪರ್ ಎಲ್ಲೆಂದರಲ್ಲಿ ಬಿಸಾಡದೇ ನಿಗದಿಪಡಿಸಿದ ಸ್ಥಳಗಳಲ್ಲಿ ಹಾಕುವುದು ಹಾಗೂ ಕ್ರಮವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಸ್ಮಾರಕಗಳ ಸಂರಕ್ಷಣೆ ಮಾಡುವ ಉದ್ದೇಶದಿಂದ ನಮ್ಮ ನಡಿಗೆ ಪರಂಪರೆಯ ಕಡೆಗೆ ಎಂಬ ಘೋಷವಾಕ್ಯದೊಂದಿಗೆ ಗಿಡ-ಗಂಟೆಗಳಿAದ ಮುಚ್ಚಿ ಹೋಗುತ್ತಿದ್ದ ಸ್ಮಾರಕಗಳ ಸ್ವಚ್ಛತೆ, ಸಂರಕ್ಷಣಾ ಅಭಿಯಾನವನ್ನು ಹಮ್ಮಿಕೊಂಡಿದ್ದು ಒಳ್ಳೆಯ ಕೆಲಸವಾಗಿದೆ. ಇದೊಂದು ಉತ್ತಮ ಕಾರ್ಯವಾಗಿದೆ. ಸ್ಥಳೀಯ ಜನರಿಗೆ ಹಾಗೂ ಯುವ ಪೀಳಿಗೆಗೆ ಸ್ಮಾರಕಗಳು, ದೇವಾಲಯಗಳ ಬಗ್ಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ. ಅದಕ್ಕಾಗಿ ನಾವೆಲ್ಲರೂ ಕೈಜೋಡಿಸಿ ಸ್ಮಾರಕಗಳು, ದೇವಾಲಯಗಳ ಸಂರಕ್ಷಣೆ ಮಾಡಲು ಸಹಕಾರ ನೀಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಐ.ಎ.ಎಸ್ ಅಧಿಕಾರಿ ಶಿಲ್ಪಾ ಶರ್ಮ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ ನಾಗರಾಜ್, ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ, ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಗ್ರಾ.ಪಂ ಉಪಾಧ್ಯಕ್ಷರಾದ ಶರಣಪ್ಪ ಗುತ್ತೂರ, ಪಿಡಿಓ ಲಕ್ಣ್ಮೀದೇವಿ, ಗ್ರಾ.ಪಂ ಸದಸ್ಯರು, ಶಾಲಾ ಮಕ್ಕಳು, ಶಿಕ್ಷಕರು, ಎಸ್.ಬಿ.ಎಂ, (ಗಾ), ನರೇಗಾ, ಸಂಜೀವಿನಿ ಯೋಜನೆಯಗಳ ಸಮಾಲೋಚಕರು/ಸಂಯೋಜಕರು, ಎಸ್.ಹೆಚ್.ಜಿ ಒಕ್ಕೂಟದ ಮಹಿಳೆಯರು, ಗ್ರಾ.ಪಂ ಸಿಬ್ಬಂದಿಗಳು ಸಾರ್ವಜನಿಕರು ಇತರರು ಇದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




