ಕೈ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಗೆಲುವು ಖಚಿತ- ಶಾಸಕ.ಆರ್.ಬಸನಗೌಡ ತುರ್ವಿಹಾಳ
ಕೈ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಗೆಲುವು ಖಚಿತ- ಶಾಸಕ.ಆರ್.ಬಸನಗೌಡ ತುರ್ವಿಹಾಳ
ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದ ಪ್ರಚಾರ ಸಭೆಯಲ್ಲಿ ಮಾತನಾಡಿದ ಶಾಸಕ ಆರ್. ಬಸನಗೌಡ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಎಲ್ಲರ ಮನೆಬಾಗಿಲಿಗೆ ತಲುಪಿಸಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಅದರದೇ ಆದ ಇತಿಹಾಸವಿದೆ ಇಡೀ ದೇಶದಲ್ಲಿ ನುಡಿದಂತೆ ನಡೆದ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ . ಕೊಪ್ಪಳ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ಅವರನ್ನು ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು
ನಂತರ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಭರವಸೆಗಳನ್ನ ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಜನರ ಆರ್ಥಿಕ ಸಬಲೀಕರಣಕ್ಕೆ ನಾಂದಿಯಾಗಿದೆ ಎಂದು ತಿಳಿಸಿದರು. ಕೊಪ್ಪಳ ಕ್ಷೇತ್ರ ಅಭಿವೃದ್ಧಿಗಾಗಿ ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು..
ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಮಲ್ಲನಗೌಡ ದೇವರಮನಿ ಕಾಂಗ್ರೆಸ್ ಮುಖಂಡರು, ಶಾಸಕ ಹಂಪನಗೌಡ ಬಾದರ್ಲಿ ಸಿಂಧನೂರ್, ಅಮರೇಗೌಡ ಬಯ್ಯಾಪುರ, ಸಂಗಣ್ಣ ಕರಡಿ, ಶಿವರಾಜ್ ತಂಗಡಗಿ,ಮಲ್ಲಿಕಾರ್ಜುನ ನಾಗಪ್ಪ ,ಪಟ್ಟಣದ ಸದಸ್ಯರು ಹಾಗೂ ಸುತ್ತಮುತ್ತಲಿನ ಗ್ರಾಮದ ಮುಖಂಡರು ಅನೇಕರು ಭಾಗವಹಿಸಿದ್ದರು.
ವರದಿಗಾರರು:ವಿಜಯ್ ಕುಮಾರ್ ಹಿರೇಮಠ್ ತುರ್ವಿಹಾಳ.



