ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಶಾಂತಿ ಸಭೆ.ಗಂಗಾವತಿ

ಗಂಗಾವತಿ, ಸೆ. 7:
ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಶಾಂತಿ ಸಭೆ
ಗಂಗಾವತಿ, ಸೆ. 7: ಗೌರಿ–ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯೊಂದಿಗೆ ಆಚರಿಸುವ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ರಂಗಪ್ಪ ದೊಡ್ಡಮನಿ ಹಾಗೂ ಪಿಎಸ್ಐ ಬಸವರಾಜ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಗ್ರಾಮೀಣ ಭಾಗದ ಸಾರ್ವಜನಿಕರು, ಮುಖಂಡರು ಹಾಗೂ ಹಬ್ಬದ ಆಯೋಜಕರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಗೌರಿ–ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸುವುದು, ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಮೆರವಣಿಗೆ ಹಾಗೂ ಕಾರ್ಯಕ್ರಮಗಳನ್ನು ನಡೆಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಂಡು, ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು. ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರ ಗಮನಕ್ಕೆ ತಂದು ಕಾನೂನುಬದ್ಧವಾಗಿ ಪರಿಹಾರ ಕಂಡುಕೊಳ್ಳುವಂತೆ ತಿಳಿಸಲಾಯಿತು.
ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೌರಿ–ಗಣೇಶ ಹಬ್ಬವನ್ನು ಎಲ್ಲರೂ ಒಗ್ಗಟ್ಟಿನಿಂದ ಹಾಗೂ ಶಾಂತಿಯುತವಾಗಿ ಆಚರಿಸುವುದಾಗಿ ಭರವಸೆ ನೀಡಿದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ





