ನವಲಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ ಸಿಂಗಾರಗೊಂಡಿರುವ ನವಲಿ ಗ್ರಾಮ.

ನವಲಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ
ಮೆರವಣಿಗೆಯ ಸ್ವಾಗತಕ್ಕೆ ಮಧುವಣಗಿತ್ತೆಯಂತೆ ಸಿಂಗಾರಗೊಂಡಿದ್ದ ನವಲಿ ಗ್ರಾಮ
ಕನಕಗಿರಿ : ತಾಲೂಕಿನ ನವಲಿ ಗ್ರಾಮಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯನ್ನು ತಾಲೂಕು ಆಡಳಿತ, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ವತಿಯಿಂದ ಬುಧವಾರ ಆದ್ದೂರಿಯಾಗಿ ಸ್ವಾಗತಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು.
ನಾಡದೇವಿ ಭುವನೇಶ್ವರಿ ದೇವಿಗೆ ತಹಶೀಲ್ದಾರ್ ವಿಶ್ವನಾಥ ಮುರುಡಿ, ತಾ.ಪಂ ಇಓ ಚಂದ್ರಶೇಖರ್ ಬಿ ಕಂದಕೂರ್ ಅವರು ಸೇರಿದಂತೆ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಪೂಜೆ ಸಲ್ಲಿಸಿ ರಥಯಾತ್ರೆಯನ್ನು ಸ್ವಾಗತಿಸಿ, ಮೆರವಣಿಗೆಗೆ ಚಾಲನೆ ನೀಡಿದರು.
ರಥಯಾತ್ರೆಯ ಸ್ವಾಗತಕ್ಕೆ ಇಡೀ ಗ್ರಾಮವನ್ನೇ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಗ್ರಾಮದ ಪ್ರಮುಖ ವೃತ್ತಗಳನ್ನು ಹೂವಿನಿಂದ ಅಲಂಕೃತಗೊಳಿಸಿ ರಂಗೋಲಿಗಳನ್ನು ಹಾಕಲಾಗಿತ್ತು. ಈ ವೇಳೆ ಕುಂಭ ಮೆರವಣಿಗೆ, ಜಾನಪದ ಕಲಾತಂಡಗಳು, ಶಾಲಾ ಕಾಲೇಜು ಮಕ್ಕಳು, ಕನ್ನಡಪ್ರೇಮಿಗಳು ಕನ್ನಡ ಧ್ವಜ ಹಿಡಿದು ವಿವಿಧ ಹೋರಾಟಗಾರರ, ದಾರ್ಶನಿಕರ ವೇಷಭೂಷಣಗಳಲ್ಲಿ ಪಾಲ್ಗೊಂಡಿದ್ದು ನೋಡುಗರ ಗಮನ ಸೆಳೆಯಿತು.
ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ನಾಗೇಶ್ H, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಕನ್ನಡ ಪರ, ರೈತ ಪರ ಸಂಘಟನೆ ಮುಖಂಡರು, ಅಂಗನವಾಡಿ – ಆಶಾ ಕಾರ್ಯಕರ್ತರು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು, ಗ್ರಾ.ಪಂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




