ನವಲಿ ಗ್ರಾಮ ಆ.25ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ. ಕನಕಗಿರಿ

ನವಲಿ ಗ್ರಾಮ ಆ.25ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕನಕಗಿರಿ: ತಾಲೂಕ ನವಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಿ ಎಸ್.ಎಸ್.ಪಿ. ಲೈಫ್ ಮಿಷನ್ ಹಾಗೂ ಸುತ್ತಗಿರಿ ಆಸ್ತ್ರಿ, ಬೆಂಗಳೂರು ಇವರ ಸಹಯೋಗದಲ್ಲಿ ವಿವಿಧ ಕಾಯಿಲೆಗಳ ಕುರಿತು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆ.25ರಂದು ಆಯೋಜಿಸಲಾಗಿದೆ.
ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್ ಸೇರಿದಂತೆ ಸಾಮಾನ್ಯ ರೋಗಗಳು, ಸ್ತ್ರೀರೋಗ ಹಾಗೂ ಮೂಳೆ-ಕೀಲು ಸಂಬಂಧಿತ ಕಾಯಿಲೆಗಳ ತಪಾಸಣೆ ಮತ್ತು ವೈದ್ಯಕೀಯ ಸಲಹೆಯನ್ನು ಶಿಬಿರದಲ್ಲಿ ಉಚಿತವಾಗಿ ನೀಡಲಾಗುತ್ತದೆ.
, ಕೊಪ್ಪಳ ಜಿಲ್ಲೆಯಲ್ಲಿ ಶಿಬಿರವು ಆ.25ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕನಕಗಿರಿ ತಾಲೂಕಿನ ನವಲಿ ದುರ್ಗಾದೇವಿ ಸಮುದಾಯ ಭವನ, 1ನೇ ವಾರ್ಡ್, ಕನಕಗಿರಿ ತಾಲೂಕು ನವಲಿ ಗ್ರಾಮದನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಅಗತ್ಯವಿರುವ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಎಸ್.ಎಸ್.ಪಿ. ಲೈಫ್ ಮಿಷನ್ ಸಂಸ್ಥೆಯವರು ಮನವಿ ಮಾಡಿದ್ದಾರೆ. ಶಿಬಿರದಲ್ಲಿ ವಿವಿಧ ಕ್ಷೇತ್ರಗಳ ತಜ್ಞ ವೈದ್ಯರು ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ 8867257737



