ಸಂಪಾದಕೀಯ

ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಸಪ್ತಾಹ ಉಚಿತ ಆರೋಗ್ಯ ತಪಾಸಣೆ ಶಿಬಿರ.

ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಸಪ್ತಾಹ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬಿನ್ನಿಪೇಟೆ: ಸೆಂಟ್ ಲಾರ್ಡ್ಸ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ಜಿಲ್ಲಾ ಬಿಜೆಪಿ ವತಿಯಿಂದ ಪ್ರಧಾನಿ ಶ್ರೀ ನರೇಂದ್ರಮೋದಿರವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ.

ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್ ರವರು, ಬಿಜೆಪಿ ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿಗೌಡರು, ಮಾಜಿ ಪಾಲಿಕೆ ಸದಸ್ಯ ಬಿಟಿಎಸ್ ನಾಗರಾಜ್ ರವರು, ಬಿಜೆಪಿ ಯುವ ಮುಖಂಡರಾದ ಅಭಿನಾಗ್ ರವರು, ಭಾರತಮಾತೆ, ಪಂಡತ್ ದೀನ್ ದಯಾಳ್ ಉಪಾಧ್ಯಾಯ, ಶ್ಯಾಮಪ್ರಸಾದ ಮುಖರ್ಜಿರವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸಿ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು.

ಮಾಜಿ ಪಾಲಿಕೆ ಸದಸ್ಯರುಗಳಾದ ಶಿವಪ್ರಕಾಶ್, ಗೋಪಾಲ್ ಮತ್ತು ಡಾ||ಹರ್ಷರವರು ಉಪಸ್ಥಿತರಿದ್ದರು.

ಸಂಸದರಾದ ಪಿ.ಸಿ.ಮೋಹನ್ ರವರು ಮಾತನಾಡಿ ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಅಚರಿಸಲು ಮತ್ತು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸೇವಾ ಪಾಕ್ಷಿಕ ಕಾರ್ಯಕ್ರಮ 15ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ, ನೇತ್ರದಾನ ವಿವಿಧ ಸಾಮಾಜಿಕ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ
ಉತ್ತಮ ಸೇವೆ, ಸೌಲಭ್ಯ ಒದಗಿಸಿ ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಅಚರಿಸಲಾಗುತ್ತಿದೆ.

ಕಾಂಗ್ರೆಸ್ ಪಕ್ಷ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ಮತಗಳ್ಳತನ ವಿರುದ್ದ ವಿನಾಕಾರಣ ಅರೋಪ ಮಾಡುತ್ತಿದ್ದಾರೆ ಚುನಾವಣೆ ಆಯೋಗಕ್ಕೆ ಎರಡು ವರ್ಷವಾದರು ದೂರು ಯಾಕೆ ಸಲ್ಲಿಸಿಲ್ಲ ಎಂದು ಹೇಳಿದರು.

ಜಿಲ್ಲಾಧ್ಯಕ್ಷರಾದ ಸಪ್ತಗಿರಿಗೌಡರು ಮಾತನಾಡಿ ಪ್ರಧಾನಿ ನರೇಂದ್ರಮೋದಿ ರವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟಂಬರ್ 17ರಿಂದ ಅಕ್ಟೋಬರ್ 2ರವರಗೆ ಸೇವಾ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ.

ಉಚಿತ ಆರೋಗ್ಯ ತಪಾಸಣೆ ರಕ್ತದಾನ, ನೇತ್ರದಾನ ಹಾಗೂ ಸ್ವಚ್ಚತಾ ಕಾರ್ಯಕ್ರಮ ಹಾಗೂ ದೃಷ್ಟಿ ದೋಷ ಇರುವವರಿಗೆ ಉಚಿತ ಕನ್ನಡಕ ಮತ್ತು ಉಚಿತವಾಗಿ ಕಣ್ಣಿನ ಅಪರೇಷನ್ ಮಾಡಿಸಲಾಗುತ್ತಿದೆ.

ಸಾರ್ವಜನಿಕರ ಒಳಿಗೆ ಜನಸ್ನೇಹಿಯಾಗಿ ಅವರ ಸಮಸ್ಯೆಗಳ ನಿವಾರಣೆಗಾಗಿ ಸೇವಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಬಿ.ಪಿ, ಶುಗರ್ ಪರೀಕ್ಷೆ,ವೈದ್ಯಕೀಯ ವಿಭಾಗಕೀಲು ಮತ್ತು ಮೂಳೆ ವಿಭಾಗ,ಕಣ್ಣಿನ ವಿಭಾಗ ಕಿವಿ, ಮೂಗು, ಗಂಟಲು ವಿಭಾಗಶಸ್ತ್ರ ಚಿಕಿತ್ಸಾ ವಿಭಾಗ
ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗ
ಮಕ್ಕಳ ವಿಭಾಗ,ಚರ್ಮರೋಗ ವಿಭಾಗ ತಜ್ಞರು
2ಡಿ ಇಕೋ ಪರೀಕ್ಷೆ,ಉಚಿತ ಔಷಧಿ ವಿತರಣೆ, ದಂತ ಪರೀಕ್ಷೆ ಮಾಡಲಾಯಿತು.

Related Articles

Leave a Reply

Your email address will not be published. Required fields are marked *

Back to top button