ಬಸವರಾಜ್ ರೆಡ್ಡಿ ಮನೆಗೆ ಸಚಿವ ಶಿವರಾಜ್ ಸಂಗಡಗಿ ಭೇಟಿ: ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಭರವಸೆ.

ಬಸವರಾಜ್ ರೆಡ್ಡಿ ಮನೆಗೆ ಸಚಿವ ಶಿವರಾಜ್ ಸಂಗಡಗಿ ಭೇಟಿ: ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಭರವಸೆ
ಕನಕಗಿರಿ: ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಬಸವರಾಜ್ ರೆಡ್ಡಿ ಅವರ ನಿವಾಸಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ಸಂಗಡಗಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಸವರಾಜ್ ರೆಡ್ಡಿ ಅವರ ಕುಟುಂಬಸ್ಥರೊಂದಿಗೆ ಮಾತನಾಡಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕುಟುಂಬಕ್ಕೆ ನ್ಯಾಯ ದೊರಕಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಹರಸಿದ್ದಿ ಅವರು ಕುಟುಂಬಸ್ಥರೊಂದಿಗೆ ಮಾತನಾಡಿ, ಪ್ರಕರಣದ ತನಿಖೆ ಹಾಗೂ ಮುಂದಿನ ಕಾನೂನು ಕ್ರಮಗಳ ಕುರಿತು ಭರವಸೆ ನೀಡಿದರು.
ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಗಂಗಾಧರ್ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವೀರೇಶ್ ಸಂಗಡಗಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಎಂ. ಪಾಟೀಲ್, ಟಿ.ಜೆ. ರಾಮಚಂದ್ರ, ಪಟ್ಟಣ ಪಂಚಾಯಿತಿ ಸದಸ್ಯರಾದ ರಾಜ ನಂದಾಪುರ, ಸಂಗಪ್ಪ ಸಜ್ಜನ್, ರಾಕೇಶ್ ಕಂಪ್ಲಿ, ಸಿದ್ದಾರ್ಥ್, ಕೆ. ನಾಗರಾಜ್ ಬೋಂಡಾಡಿ, ಶಾಂತಪ್ಪ ಸೇರಿದಂತೆ ರೆಡ್ಡಿ ಸಮಾಜದ ಹಿರಿಯ ಮುಖಂಡರು, ಮಲ್ಲಿಕಾರ್ಜುನ್ ರೆಡ್ಡಿ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.
ಸಚಿವರು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಬಸವರಾಜ್ ರೆಡ್ಡಿ ಅವರ ಪತ್ನಿ ಮತ್ತು ಕುಟುಂಬಸ್ಥರೊಂದಿಗೆ ಮಾತನಾಡಿ, ಕುಟುಂಬದ ನೋವನ್ನು ಆಲಿಸಿ ನ್ಯಾಯ ಒದಗಿಸುವ ಭರವಸೆ ನೀಡಿದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ.





