ಸುದ್ಧಿ

ಭಕ್ತಿ ಭಂಡಾರಿ,ಅಣ್ಣ ಬಸವಣ್ಣನವರು, ಸಮಾಜ ಸುಧಾರಕರ ಜಯಂತಿ ಆಚರಿಸೋಣ.

Jai Basav
ಕಾಯಕವೇ ಕೈಲಾಸ ಎಂದ ಮಹಾನ್ ಪುರುಷ ಬಸವಣ್ಣ ಹುಟ್ಟಿದ ದಿನವನ್ನ ಬಸವ ಜಯಂತಿ ಎಂದು ನಾಡಿನಾದ್ಯಂತ ಆಚರಣೆ ಮಾಡಲಾಗುತ್ತದೆ. 12 ನೇ ಶತಮಾನದ ಸಮಾಜ ಸುಧಾರಕರಾದ ಇವರ ಜಯಂತಿಯನ್ನು ಆಚರಿಸೊಇಣ. ಭಕ್ತಿ ಭಂಡಾರಿ ಬಸವಣ್ಣನನ್ನು ಕವಿ, ದಾರ್ಶನಿಕ ಹಾಗೂ ಸಂತರೆಂದು ನಂಬಲಾಗಿದೆ. ಅನುಭವ ಮಂಟಪವನ್ನು ಕಟ್ಟಿದರು.

ಬಸವಣ್ಣನವರು 1134 ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ 8ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.

ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು.ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾವೋಹ ಹೊಂದುವುದು ಘೋರ ಅಪರಾಧ. ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು. ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕಾರಣವಾದರು.

ಬಸವಣ್ಣ ಒಬ್ಬ ಮಹಾನ್ ಸಾಮಾಜಿಕ ಸುಧಾರಕ ಮತ್ತು ದಾರ್ಶನಿಕ. ವಚನ ಸಾಹಿತ್ಯದ ಮೂಲಕ ಅವರು ಸಾಮಾಜಿಕ ಜಾಗೃತಿ ಪ್ರಾರಂಭಿಸಿದರು. ಲಿಂಗ, ಜಾತಿ ಪದ್ಧತಿಯನ್ನು ತಿರಸ್ಕರಿಸಿದರು. ಇದರ ಜೊತೆಗೆ ಇಷ್ಟಲಿಂಗದ ಬಗ್ಗೆ ಪರಿಚಯಿಸಿದರು. ಬಿಜ್ಜಳ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವಣ್ಣ ಅನುಭವ ಮಂಟಪವನ್ನು ಪ್ರಾರಂಭಿಸಿದರು. ಇದು ಮುಂದೆ ಎಲ್ಲಾ ವರ್ಗದ ಜನರಿಗೆ ಜೀವನದ ಆಧ್ಯಾತ್ಮಿಕ ಸಮಸ್ಯೆಗಳನ್ನು ಬಹಿರಂಗವಾಗಿ ಚರ್ಚಿಸುವ ಸಾಮಾನ್ಯ ಕೇಂದ್ರವಾಯಿತು. ಬಸವಣ್ಣನ ವಚನ ಸಾಹಿತ್ಯದ ಮೂಲಕ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದರು.

ಅಂತರಂಗ ಶುದ್ಧಿ ಬಹಿರಂಗ ಶುದ್ದಿ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸಿದ ಬಸವಣ್ಣ 12ನೇ ಶತಮಾನದಲ್ಲಿ ಜನಿಸಿದರು. ಹಿಂದೂ ಕ್ಯಾಲೆಂಡರ್ ಪ್ರಕಾರ, ಸಾಮಾನ್ಯವಾಗಿ ಬಸವಣ್ಣನ ಜನ್ಮದಿನವು ವೈಶಾಖ ತಿಂಗಳ 3 ನೇ ದಿನದಂದು ಆಚರಿಸಲಾಗುತ್ತದೆ (ಕೃಪೆ). ವರದಿಗಾರರು ಮಹೇಶ್ವರ ಬಾರಿಕರ್ ವಿಜಯನಗರ

Related Articles

Leave a Reply

Your email address will not be published. Required fields are marked *

Back to top button