ಸುದ್ಧಿ

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಬೆಳಸಿ ಸಂಸದ ಜಿ ಕುಮಾರ ನಾಯಕ.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಬೆಳಸಿ ಸಂಸದ ಜಿ ಕುಮಾರ ನಾಯಕ

ರಾಯಚೂರು ಅಕಾಡೆಮಿ ಮತ್ತು ಕ್ರಿಯೇಟಿವ್ ಎಜುಕೇಶನ್ ಸೊಸೈಟಿಯ ರೇಸ್ ಕಾನ್ಸೆಪ್ಟ್ ಶಾಲೆಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ರಾಯಚೂರು ಲೋಕಸಭಾ ಕ್ಷೇತ್ರ ಸಂಸದರಾದ ಶ್ರೀ ಜಿ ಕುಮಾರ ನಾಯಕ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾಡಿದವರು, ರೇಸ್ ಸಂಸ್ಥೆಯು ರಾಯಚೂರು ಜನತೆಗೆ ಕಳೆದ ಹತ್ತು ವರ್ಷಗಳಿಂದ ಅನೇಕ ಶಾಲಾ ಸಂಸ್ಥೆಗಳನ್ನು ಸ್ಥಾಪಿಸಿ ಜ್ಞಾನದಸೋಹವನ್ನು ರಾಯಚೂರಿನ ಜನಕ್ಕೆ ನೀಡುತ್ತಾ ಬಂದಿದೆ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವುದರ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಕರ ಕರ್ತವ್ಯವಾಗಿದೆ ಮಕ್ಕಳಿಗೆ ಮಾನವ ಮೌಲ್ಯಗಳನ್ನು ಬೆಳಸಿ ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವುದು ಶಿಕ್ಷಕರ ಕರ್ತವ್ಯ ಎಂದು ಮಾತನಾಡಿದರು ಈ ವೇಳೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವೆಂಕಟಪುರ ಷಣ್ಮುಖಪ್ಪ ಹಾಗೂ ಕಾರ್ಯದರ್ಶಿಗಳಾದ ಶ್ರೀ ವೆಂಕಟ್ ಕೃಷ್ಣ ಸೇರಿದಂತೆ ಸಂಸ್ಥೆಯ ಸದಸ್ಯರು ಬೋಧಕ ಬೋಧಕರ ವರ್ಗ ಮುದ್ದು ಮಕ್ಕಳು, ಪಾಲಕರು ಹಾಗೂ ಸಾರ್ವಜನಿಕರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button