ಸುದ್ಧಿ

ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ತೆರೆಕಾಣಲಿದೆ – ಸಂದೀಪ್ ಕಾಮತ್ ಬೆಂಗಳೂರು.

ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ತೆರೆಕಾಣಲಿದೆ – ಸಂದೀಪ್ ಕಾಮತ್ ಬೆಂಗಳೂರು. ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ತೆರೆಕಾಣಲಿದೆ – ಸಂದೀಪ್ ಕಾಮತ್ ಅವರು ಇಂದು ಬೆಂಗಳೂರು ಪ್ರೆಸ್ಸ್ ಕ್ಲಬ್ ನಲ್ಲಿ ತಿಳಿಸಿದರು. ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಮ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ. ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು. ಕರಾವಳಿ ಭಾಗದ ಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ.

“ಲೈಟ್ ಹೌಸ್” ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ.

ಖ್ಯಾತ ಕಲಾವಿದರಾದ ಶೋಭರಾಜ್ ಪಪೂರ್, ಮಾನಸಿ ಸುಧೀರ್, ಪ್ರಕಾಶ್ ತೂಮಿನಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮೂಲ್ಕಿ, ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ, ರವ್ ಮಕಾಲ, ಚಲಮ್ಮ, ಕುಲಮ್ಮ ನಮಿತಾ ಕಿರಣ್ ಚಿತ್ರದ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕೀ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿರುತ್ತಾರೆ.

ಚಿತ್ರದ ಛಾಯಗ್ರಹಣ ಹಾಗೂ ಸಂಕಲನದ ಜವಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮುಲ್ಕಿ ನೀಡಿರುತ್ತಾರೆ. ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿರುತ್ತಾರೆ.
ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ರಾಜ್ಯದ ಬಹುತೇಕ ಕಡೆಗಳಲ್ಲಿ ತೆರೆಕಾಣಲಿದ್ದು ಚಿತ್ರದಲ್ಲಿ ಸಮಾಜದ ಜನತೆಗೆ ಹಾಗೂ ಮಕ್ಕಳಿಗೆ ಆನೇಕ ಸಂದೇಶಗಳು ಇದ್ದು, ಪ್ರತೀ ಒಬ್ಬ ಪೋಷಕರು ತಮ್ಮ ಮಕ್ಕಳೊಂದಿಗೆ ಕೂತು ಸಿನೆಮಾವನ್ನು ನೋಡಬಹುದಾಗಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು. ಮುಂತಾದವರು ಉಪಸ್ಥಿತರಿದ್ದರು . ವರದಿ.ಮಂಜುಳಾ ರೆಡ್ಡಿ.

Related Articles

Leave a Reply

Your email address will not be published. Required fields are marked *

Back to top button