ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ. ಕೊಪ್ಪಳ.

ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ : 2023-24ನೇ ಸಾಲಿಗಾಗಿ ಮೆಟ್ರಿಕ್ ನಂತರದ ಕೋರ್ಸುಗಳಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ SHP (State Hostel Portal) ಆನ್-ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಪೋಷಕರು/ವಿದ್ಯಾರ್ಥಿಗಳು ವೆಬ್‌ಸೈಟ್ ವಿಳಾಸ https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 15 ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಕೊಪ್ಪಳ ನಗರದ ವಿಜಯನಗರ ಬಡಾವಣೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ(ವಸತಿ ನಿಲಯದ ಸಂಕೇತ: ಎಂಡಬ್ಲೂಡಿ208), ಗಣೇಶ ತೆಗ್ಗು, ಕೊಪ್ಪಳ-01 ದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ209), ಕೊಪ್ಪಳ-02(ಮೇಲ್ದರ್ಜೆಗೇರಿಸಿದ) ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ210), ಬಿಲಾಲ ನಗರದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ207), ಆರೋಗ್ಯ ಬಡಾವಣೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ206), ಗಂಗಾವತಿ ನಗರದ ಗಂಗಾವತಿ-01 ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ199), ಉಪ್ಪಾರ ಓಣಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ202), ಗಂಗಾವತಿ-02 (ಮೇಲ್ದರ್ಜೆಗೇರಿಸಿದ) ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ200), ಕುಷ್ಟಗಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ204), ಕಾರಟಗಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ(ವ.ನಿ.ಸಂ: ಎಂಡಬ್ಲೂಡಿ205), ಯಲಬುರ್ಗಾದ ಹುಡ್ಕೊ ಕಾಲೋನಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ (ವ.ನಿ.ಸಂ: ಎಂಡಬ್ಲೂಡಿ211) ವಸತಿ ನಿಲಯಗಳಿಗೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
2023-24ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾಸಿರಿ ಯೋಜನೆಯನ್ನು ಎಸ್.ಎಚ್.ಪಿ ತಂತ್ರಾಂಶದ ಮೂಲಕವೇ ಅನುಷ್ಠಾನಗೊಳಿಸಲಾಗುತ್ತದೆ. ಈ ಯೋಜನೆಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ (ಎಸ್.ಎಚ್.ಪಿ) ಅರ್ಜಿ ಹಾಕಿ ವಿದ್ಯಾರ್ಥಿನಿಲಯಗಳಲ್ಲಿ ಸೀಟು ಲಭ್ಯವಾಗದಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗುತ್ತಾರೆ. ವಿದ್ಯಾಸಿರಿ ಯೋಜನೆಗಾಗಿ ಪ್ರತ್ಯೇಕವಾಗಿ ಅರ್ಜಿಗಳನ್ನು ಅಹ್ವಾನಿಸುವುದಿಲ್ಲ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು. ವಸತಿ ನಿಲಯಗಳಲ್ಲಿ ಶೇ.75 ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ. ಗಳಿಗಿಂತ ಮೀರಿರಬಾರದು. ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1.00 ಲಕ್ಷ ರೂ.ಗಳಿಗಿಂತ ಮೀರಿರಬಾರದು, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್, ಅಂಕಪಟ್ಡಿ ಹಾಗೂ ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ -08539-225070, ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಹತ್ತಿರದ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



