ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ಟಿ.ಜೆ. ರಾಮಚಂದ್ರ

ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ಟಿ.ಜೆ. ರಾಮಚಂದ್ರ
ಕನಕಗಿರಿ: ಕನಕಗಿರಿ ತಾಲೂಕಿನ ಹಿಂದುಳಿದ ವರ್ಗಗಳ ಮುರಾರ್ಜಿ ದೇಸಾಯಿ ವಸತಿ ಶಾಲೆ (ಸಂಖ್ಯೆ–605)ಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ಟಿ.ಜೆ. ರಾಮಚಂದ್ರ ಅವರು ತಮ್ಮ ಪತಿಯೊಂದಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳು ಹಾಗೂ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಭೇಟಿಯ ವೇಳೆ ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸಿದ ಅಧ್ಯಕ್ಷೆ, ಶೈಕ್ಷಣಿಕ ಪ್ರಗತಿ, ವಸತಿ ನಿಲಯದ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಹಪಂಕ್ತಿಯಲ್ಲಿ ಊಟ ಮಾಡಿ ಆತ್ಮೀಯತೆ ಮೆರೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ತನುಶ್ರೀ ಟಿ.ಜೆ. ರಾಮಚಂದ್ರ, “ಇಂದಿನ ವಿದ್ಯಾರ್ಥಿಗಳೇ ಮುಂದಿನ ದೇಶದ ಭವಿಷ್ಯ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಬೇಕು. ಅವರ ಉಜ್ವಲ ಭವಿಷ್ಯಕ್ಕಾಗಿ ನಮ್ಮ ಸೇವೆ ಹಾಗೂ ಸಹಕಾರ ಸದಾ ಇರುತ್ತದೆ. ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಸಿದ್ದಲಿಂಗಪ್ಪ ದೇಮಣ್ಣವರ, ಪ್ರಭಾರಿ ನಿಲಯಪಾಲಕರಾದ ಶ್ರೀ ರಮೇಶ್ ಬೂದಿಹಾಳ್, ಶಿಕ್ಷಕರಾದ ಶ್ರೀಮತಿ ರುಬಿಯ ಜಿ.ಟಿ., ಶ್ರೀಮತಿ ಗೀತಾಂಜಲಿ, ಶ್ರೀ ಸ್ವಾತಿ, ಮುದುಕಪ್ಪ, ನರ್ಸಿಂಗ್ ಆಫೀಸರ್ ವೀರೇಶ್ ಗೆಜ್ಜೆಳ್ಳಿ, ದೈಹಿಕ ಶಿಕ್ಷಕರಾದ ಸಿದ್ದಪ್ಪ ಹಾಗೂ ಶಾಮಣ್ಣ ಗುರಿಕಾರ್, ಪ್ರಥಮ ದರ್ಜೆ ಸಹಾಯಕರೊಂದಿಗೆ ಅಡುಗೆ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಅಧ್ಯಕ್ಷೆಯ ಗಮನಕ್ಕೆ ತಂದು ಶೀಘ್ರ ಪರಿಹಾರಕ್ಕೆ ಮನವಿ ಸಲ್ಲಿಸಿದರು. ಅಧ್ಯಕ್ಷೆಯ ಭೇಟಿ ಹಾಗೂ ವಿದ್ಯಾರ್ಥಿಗಳೊಂದಿಗೆ ನಡೆಸಿದ ಆತ್ಮೀಯ ಸಂವಾದವನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿಗಾರ ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ 8867257737







