ಶೋಭಾ ಕರಂದ್ಲಾಜೆ ಯನ್ನು ಬೆಂಬಲಿಸಬಾರದು ಎಂದ ಪಕ್ಷೇತರ ಅಭ್ಯರ್ಥಿ ಕೆ.ವಿ ನಂಜುಂಡಸ್ವಾಮಿ
ಶೋಭಾ ಕರಂದ್ಲಾಜೆ ಯನ್ನು ಬೆಂಬಲಿಸಬಾರದು ಎಂದ ಪಕ್ಷೇತರ ಅಭ್ಯರ್ಥಿ ಕೆ.ವಿ ನಂಜುಂಡಸ್ವಾಮಿ
23 ವರ್ಷಗಳಿಂದ ಬಿಜೆಪಿ ಪಕ್ಷದ ಅವಿರತಾ ಸೇವೆ ಸಲ್ಲಿಸಿದ ಕಾರ್ಯಕರ್ತರನ್ನ ಕಡೆಗಣಿಸಿ ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಟ್ಟು ಪಕ್ಷ ಮೋಸ ಮಾಡಿದೆ. ಇದರ ವಿರುದ್ಧ ನಾನು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕಿ.ವಿ ನಂಜುಂಡಸ್ವಾಮಿ ತಿಳಿಸಿದರು
ಪತ್ರಿಕ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನರಿಂದ ತಿರಸ್ಕೃತಗೊಂಡು ಈಗ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬಂದಿದ್ದಾರೆ ಅವರಿಗೆ ಕ್ಷೇತ್ರದ ಜನರ ಮಿಡಿತ ಗೊತ್ತಿಲ್ಲ. ಈ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಆದರೂ ಪಕ್ಷ ಅವರಿಗೆ ಟಿಕೆಟ್ ಕೊಟ್ಟು ಸಾವಿರಾರು ಕಾರ್ಯಕರ್ತರಿಗೆ ಮೋಸ ಮಾಡಿದೆ. ಯಡಿಯೂರಪ್ಪ ಮತ್ತು ವಿಜಯರಾಘವೇಂದ್ರ ಪಕ್ಷವನ್ನು ಹಾಳು ಮಾಡುತ್ತಾ, ಕಾರ್ಯಕರ್ತರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಬಾರಿ ಶೋಭಾ ಕರಂದ್ಲಾಜೆ ಸೋಲುತ್ತಾರೆ ಎಂದು ಟೀಕಾ ಪ್ರಹಾರ ಮಾಡಿದರು
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿಯೂ ಸಹ ಶೋಭಾ ಕರಂದ್ಲಾಜೆ ಅವರು ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಲ್ಲ. ಈಗ ಶೋಭಾ ಕರಂದ್ಲಾಜೆ ಅವರು ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡು ಜನರಿಗೆ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದ್ದರಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ನನಗೆ ಮತದಾರರು ಆಶಿರ್ವಾದ ಮಾಡಬೇಕು ಎಂದು ಮನವಿ ಮಾಡಿದರು . ವರದಿ. ಮಂಜುಳಾ ರೆಡ್ಡಿ



