ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆ – ರವಿಚಂದ್ರ . ಪಿ.ಎನ್ ಬೆಂಗಳೂರು.

ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಿವಿ – ರವಿಚಂದ್ರ . ಪಿ.ಎನ್ ಬೆಂಗಳೂರು. ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಿವಿ ಎಂದು ಇಂದು ವಸತಿ ಶಾಲೆಗಳ ನೌಕರರ ಸಂಘದ ಅಧ್ಯಕ್ಷರಾದ ರವಿಚಂದ್ರ . ಪಿ.ಎನ್ ಅವರು ಇಂದು ಬೆಂಗಳೂರು ಪ್ರೆಸ್ಸ್ ಕ್ಲಬ್ ನಲ್ಲಿ ಅವರ ಕಷ್ಟವನ್ನು ವ್ಯಕ್ತ ಪಡಿಸಿದರು . ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ.ವ.ಶಿ.ಸ.ಸಂಘ) ಅಡಿಯಲ್ಲಿ ರಾಜ್ಯಾದ್ಯಾಂತ 834 ವಸತಿ ಶಾಲೆ/ಕಾಲೇಜುಗಳು ಕಾರ್ಯನಿರ್ವತೆ ನಿರ್ಯನಿರ್ವಹಿಸುತ್ತಿದ್ದು, ಇಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವಸತಿ ಶಿಕ್ಷಣವನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಎಲ್ಲಾ ವಸತಿ ಶಾಲೆಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರತಿ ವರ್ಷವೂ ಉತ್ತಮ ಫಲಿತಾಂಶವನ್ನು ನೀಡುತ್ತಾ ಬರುತ್ತಿವೆ. ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಕರ್ನಾಟಕ ವಸತಿ ಶಿಕ್ಷಣ ನಿರ್ದೇಶನಾಲಯ ಮಹತ್ತರ ಪಾತ್ರ ನಿರ್ವಹಿಸುತ್ತದೆ ಮತ್ತು ಸರ್ಕಾರಕ್ಕೆ ಕೀರ್ತಿಯನ್ನು ತಂದುಕೊಡುತ್ತದೆ ಹಾಗೂ 10ನೇ ತರಗತಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಗುತ್ತದೆ. ಜೊತೆಗೆ 6800 ಖಾಯಂ ನೌಕರರು ಸರ್ಕಾರಿ ನೌಕರರಾಗಿ ಎಲ್ಲಾ ಸೌಲಭ್ಯಗಳು ದೊರೆಯುತ್ತವೆ. ಇದರಿಂದ ನೌಕರರು ಮತ್ತಷ್ಟು ಉತ್ಸಾಹದಿಂದ ಪರಿಣಾಮಕಾರಿಯಾಗಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಾರೆ. ಎಂದು ರವಿ ಚಂದ್ರ ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಈ ಕೆಳಕಂಡ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ.
ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ, ಎಸ್.ಟಿ, ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡುವುದು.
ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನ ಗೊಳಿಸುವುದು.
ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವುದು.
. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡುವುದು.
. ಹೆಚ್ಚುವರಿ ಕಾರ್ಯಾಭಾರ ಇರುವುದರಿಂದ 10% ವಿಶೇಷ ಭತ್ಯೆ ಮಂಜೂರಾತಿ.
ಈ ಮೇಲಿನ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಘನ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿರುವುದಿಲ್ಲ. ಆದ್ದರಿಂದ ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ರಿಂದ 28.05.2025 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂವಿಧಾನಾತ್ಮಕ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ.
ದಿ:28.05.2025 ರೊಳಗೆ ನಮ್ಮ ಈ ಬೇಡಿಕೆಗಳು ಈಡೇರದಿದ್ದರೆ ಈ ಕೆಳಕಂಡಂತೆ ಜಿಲ್ಲಾ ಹಂತದಲ್ಲಿ ಸತ್ಯಾಗ್ರಹವನ್ನು ಕೈಗೊಳ್ಳಲಾಗುವುದು.
ದಿ:29.05.2025 ರಂದು ವಸತಿ ಶಾಲೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವುದು.
ದಿ:30.05.2025 ರಂದು ತರಗತಿಗಳ ಬಹಿಷ್ಕಾರ ಮಾಡಿ ಅಸಹಕಾರ ವ್ಯಕ್ತಪಡಿಸುವುದು.
ದಿ:31.05.2025 ರಂದು ಪಾದಯಾತ್ರೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದು.
ದಿ:02.06.2025 ರಿಂದ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಅಥವಾ ವಸತಿ ಶಾಲೆಗಳ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವುದು.
ಈ ಮೇಲೆ ತಿಳಿಸಿದಂತೆ ವಿವಿಧ ಹಂತಗಳಲ್ಲಿ ಸಂವಿಧಾನಾತ್ಮಕವಾಗಿ ಧರಣಿ ಸತ್ಯಾಗ್ರಹವನ್ನು ಅನಿರ್ದಿಷ್ಟಾವಧಿ ವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಪ್ರದಾನ ಕಾರ್ಯದರ್ಶಿ ನಟರಾಜ್ ಪಿ.ಕೆ. ಅವರು ಸರಕಾರವನ್ನು ಎಚ್ಚರಿಸಿದರು. ಈ ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಲಕ್ಷ್ಮಿ ಶೆಟ್ಟಿ, ಗಿರೀಶ್ .ಎಸ್ , ಮಹೇಶ್ ಚಂದ್ರ , ಮುಂತಾದವರು ಉಪಸ್ಥಿತರಿದ್ದರು. ವರದಿ . ಮಂಜುಳಾ ರೆಡ್ಡಿ.



