ಸಂಪಾದಕೀಯ

ಸಿಂಧನೂರು ತಾಲೂಕಿನ ಹುಡಾ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ.

ಸಿಂಧನೂರು ತಾಲೂಕಿನ ಹುಡಾ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ.

ಹೌದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹುಡಾ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 37 ವಿದ್ಯಾರ್ಥಿಗಳು ಒಳಗೊಂಡ ಈ ಶಾಲೆಯಲ್ಲಿ ಉರ್ದು ಶಿಕ್ಷಕರು ಇಲ್ಲದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಪತ್ರ ನೀಡಿದರು ಕೂಡ ಯಾವುದೇ ಸ್ಪಂದನೆ ನೀಡುತ್ತಾ ಇಲ್ಲ ಎಂದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರ ಆರೋಪ.

ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉರ್ದು ಶಿಕ್ಷಕರಿಲ್ಲದೆ ಆರು ತಿಂಗಳಗಳು ಕಳೆದರೂ ಕೂಡ ಇನ್ನೂವರೆಗೂ ಸರ್ಕಾರಿ ಶಿಕ್ಷಕರು ಇಲ್ಲ ಕೇವಲ ಗೆಸ್ಟ್ ಟೀಚರ್ ಗಳು ಬರುತ್ತಿದ್ದಾರೆ ಶಾಲೆಯ ಜವಾಬ್ದಾರಿ ಕೂಡ ಯಾರು ತೆಗೆದುಕೊಳ್ಳುತ್ತಿಲ್ಲ ಎಲ್ಲಾ ಜವಾಬ್ದಾರಿಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರು ಸರ್ವ ಸದಸ್ಯರು ಈ ಒಂದು ಶಾಲೆಯನ್ನು ನಡೆಸಿಕೊಂಡು ಹೊಂಟಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮಸ್ಥರ ಹೇಳಿಕೆ.

ಮಾಧ್ಯಮದೊಂದಿಗೆ ಮಾತನಾಡಿದ ಬಿ ಇ ಓ ರಾಜು ಇವರು ಮಾತನಾಡಿ ತಕ್ಷಣ ಶಾಲೆಗೆ ಭೇಟಿ ನೀಡಿ ಅಲ್ಲಿ ಉರ್ದು ಶಿಕ್ಷಕರನ್ನು ನೇಮಕ ಮಾಡಿ ಕೊಡುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button