ಸುದ್ಧಿ

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು ಎಂದ ನಿಖಿಲ್ ಕುಮಾರಸ್ವಾಮಿ

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು ಎಂದ ನಿಖಿಲ್

ಮುಂದೆ ಇಂಥ ಅತಿರೇಕ ಆಗದಂತೆ ಕಟ್ಟೆಚ್ಚರ ವಹಿಸಿ ಎಂದು ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಎಂದರು.

ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸಬೇಕು ಎನ್ನುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. ವರದಿ .ಮಂಜುಳಾ ರೆಡ್ಡಿ.

Related Articles

Leave a Reply

Your email address will not be published. Required fields are marked *

Back to top button