ರಾಜಕೀಯ

ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದಿಂದ ಸ್ವಾಗತ ಕೊಪ್ಪಳ.

ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದಿಂದ ಸ್ವಾಗತ

ಕೊಪ್ಪಳ : ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನವೆಂಬರ್ 20ರಂದು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂಸಿಪಿಎಲ್ ಏರೋಡ್ರಮ್‌ಗೆ ಆಗಮಿಸಿದರು.
ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಬೃಹತ್ ಮತ್ತು ಮಧ್ಯೆಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಬಳಿಕ ಮುಖ್ಯಮಂತ್ರಿಗಳು ಹೆಲಿಕ್ಯಾಪ್ಟರ್ ಮೂಲಕ ವಿಜಯಪುರಕ್ಕೆ ಪ್ರಯಾಣ ಬೆಳೆಸಿದರು. ವಿಜಯಪುರ ಕಾರ್ಯಕ್ರಮದ ಬಳಿಕ ಪುನಃ ಮುಖ್ಯಮಂತ್ರಿಗಳು ಸಂಜೆ ವೇಳೆಗೆ ಗಿಣಿಗೇರಾ ಹತ್ತಿರದ ಎಂಸಿಪಿಎಲ್ ಏರೋಡ್ರಮ್‌ಗೆ ಆಗಮಿಸಿ ಅಲ್ಲಿಂದ ಮತ್ತೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪೊಲೀಸ್ ಉಪಾಧೀಕ್ಷಕರಾದ ಶರಣಬಸಪ್ಪ ಸುಭೇದಾರ ಸೇರಿದಂತೆ ಇನ್ನೀತರ ಅಧಿಕಾರಿಗಳು ಇದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button