ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದಸಂವಿಧಾನ ದಿನಾಚರಣೆ ನವೆಂಬರ್ 26ಕ್ಕೆ. ಕೊಪ್ಪಳ ಜಿಲ್ಲೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ
ಸಂವಿಧಾನ ದಿನಾಚರಣೆ ನವೆಂಬರ್ 26ಕ್ಕೆ
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಜಿಲ್ಲಾ ವಕೀಲರ ಸಂಘ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳ ಇವರ ಸಹಯೋಗದಲ್ಲಿ ನವೆಂಬರ್ 26ರಂದು ಬೆಳಗ್ಗೆ 10.30ಕ್ಕೆ ಸಂವಿಧಾನ ದಿನಾಚರಣೆ ಕಾರ್ಯಕ್ರಮವು ನಗರದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಅವರು ಉದ್ಘಾಟಿಸುವರು. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕರ್ನಾಟಕದ ಅಧ್ಯಕ್ಷರಾದ ಈರೇಶ್ ಅಂಚಟಗೇರಿ ಅವರು ಅಧ್ಯಕ್ಷತೆ ವಹಿಸುವರು. ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕರಾದ ಮಂಜುನಾಥ ಹಿರೇಮಠ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ ಅವರು ತಿಳಿಸಿದ್ದಾರೆ.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



