ಸಂಪಾದಕೀಯ

ಮಾಜಿ ಶಾಸಕ ಬಸವರಾಜ ದಡೇಸೂಗೂರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಿ: ಉಮೇಶ್ ಮ್ಯಗಡೆ.ಕನಕಗಿರಿ.

ಮಾಜಿ ಶಾಸಕ ಬಸವರಾಜ ದಡೇಸೂಗೂರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಿ: ಉಮೇಶ್ ಮ್ಯಗಡೆ

ಕನಕಗಿರಿ: ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ ದಡೇಸುಗೂರು ಸುಮಾರು ವರ್ಷಗಳಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತರು ಹಾಗೂ ಮಾಜಿ ಶಾಸಕರಾಗಿದ್ದು, ಪಕ್ಷದ ಬಲವರ್ಧನೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.

ಇವರನ್ನು ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ಘೋಷಿಸಬೇಕೆಂದು ಕರ್ನಾಟಕ ಮಾದಿಗ ದಂಡೂರು, ಮಾದಿಗ ಹೋರಾಟ ಮೀಸಲಾತಿ ಸಮಿತಿ ಕನಕಗಿರಿ ತಾಲೂಕು ಅಧ್ಯಕ್ಷ ಉಮೇಶ ಮ್ಯಾಗಡೇ ರಾಜ್ಯದ ಹಿರಿಯ ಮುಖಂಡರಿಗೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ಬಸವರಾಜ ದಡೇಸುಗೂರು ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಕನಕಗಿರಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ತಮ್ಮ ಅಧಿಕಾರದ ಅವಧಿಯಲ್ಲಿ ಕ್ಷೇತ್ರಾದ್ಯಂತ ಸಂಚರಿಸಿ ಜನರ ಕುಂದುಕೊರತೆ, ಅಹವಾಲುಗಳನ್ನು ಮತ್ತು ಪಕ್ಷವನ್ನು ದೃಢವಾಗಿ ಕಟ್ಟುವುದರಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿರುತ್ತಾರೆ ಜೊತೆಗೆ ಬಡಜನರ ಕುಂದು ಕೊರತೆಗಳನ್ನು ಮತ್ತು ಜನಪ್ರಿಯತೆಯನ್ನು ಸ್ವೀಕರಿಸಿ ತಕ್ಷಣವೇ ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ.

ಅಲ್ಲದೇ ಅವರು ಬಿಜೆಪಿ ರಾಜ್ಯ ಮುಖಂಡರೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಿದ್ದು ಜೊತೆಗೆ ಪಕ್ಷವನ್ನು ಕಟ್ಟಲು ಅತಿ ಹೆಚ್ಚಾಗಿ ಶ್ರಮಿಸಿರುತ್ತಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ದತ್ತು ಮಗನೆಂದೇ ಹೆಸರುವಾಸಿಯಾಗಿದ್ದಾರೆ. ಪ್ರಸ್ತುತ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಪರಾಭವ ಗೊಂಡರೂ, ತಮ್ಮ ಕೈಯಲ್ಲಿ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಜನತೆ ಕುಂದು-ಕೊರತೆ ಬಗೆಹರಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅಲ್ಲದೇ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರ ಜತೆಗೂಡಿ ಕೆಲಸ ಮಾಡುತ್ತಿದ್ದಾರೆ. ಭಾಜಪಾದ ನಿಷ್ಠಾವಂತರಾದ ಇವರನ್ನು ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ಘೋಷಣೆ ಮಾಡಿದರೆ ವಿಜಯೇಂದ್ರರವರ ಜೊತೆಗೂಡಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸಲಿದ್ದಾರೆ ಎಂದು ಉಮೇಶ್ ಮ್ಯಾಗಡೇ ತಿಳಿಸಿದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button