ಸಂಪಾದಕೀಯ

ದಾಸ ಸಾಹಿತ್ಯ ಭಕ್ತ ಕನಕದಾಸ ಜಯಂತಿ ಆಚರಣೆ ಕನಕಗಿರಿ.

ದಾಸ ಸಾಹಿತ್ಯ ಭಕ್ತ ಕನಕದಾಸ ಜಯಂತಿ ಆಚರಣೆ.

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ದಾಸ ಶ್ರೇಷ್ಠರಾದ ಭಕ್ತ ಕನಕದಾಸ ಜಯಂತಿಯನ್ನು ಸಾರ್ವಜನಿಕರು ಜಾತಿ ಮತ ಭೇದಭಾವವಿಲ್ಲದೆ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ರಮೇಶ್ ನಾಯಕ್ ಅವರು ಕನಕದಾಸರು ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು ಕನಕದಾಸರು. ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತವರೇಣ್ಯರು ಕನಕದಾಸರು. ದಾಸ ಪರಂಪರೆಯ 50ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು.

ನಂತರ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹನುಮೇಶ್ ನಾಯಕ್ ಕನಕದಾಸರ ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿದ್ದಾರೆ. ಅಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದ ಕೊಡುಗೆಯನ್ನು ಮಂಡಿಗೆಗಳ ರೂಪದಲ್ಲೂ ಕೊಟ್ಟಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯ ಇವೆ. ಐದು ಮುಖ್ಯ ಕಾವ್ಯಕೃತಿಗಳ ವಿವರ ಹೀಗಿದೆ ಮೋಹನತರಂಗಿಣಿ,ನಳಚರಿತ್ರೆ,ರಾಮಧಾನ್ಯ ಚರಿತೆ, ಹರಿಭಕ್ತಿಸಾರ, ನೃಸಿಂಹಸ್ತವ ಎಂತೆಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಕೆ ವಿರುಪಾಕ್ಷಪ್ಪ ಅವರು ಕನಕದಾಸರ ಹದಿನೈದು -ಹದಿನಾರನೇ ಶತಮಾನ ಕನಕದಾಸರ ಜೀವಿತಾವಧಿಯ ಕಾಲಘಟ್ಟ. ಆ ಕಾಲದ ಹರಿದಾಸರ ಪೈಕಿ ದಾಸ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಕೊಟ್ಟವರು ಅವರು. ಕನ್ನಡ ಭಾಷೆಯ ಕೀರ್ತನೆಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆಯನ್ನು ನೀಡಿದವರು ಅವರು.

ಸಹಜ ಬದುಕು ಬಾಳಿದ ಕನಕದಾಸರು, ಕೀರ್ತನರಾರರಾಗಿ, ತತ್ತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕನಕದಾಸರು ದಂಡನಾಯಕರಾಗಿದ್ದು, ಯುದ್ಧದಲ್ಲಿ ಸೋತ ನಂತರ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತ ದಾಸರಾದರು ಎಂಬ ಐತಿಹ್ಯವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ. ವಿರೂಪಾಕ್ಷಪ್ಪ ಮಾಜಿ ಸಂಸದರು, ಹುಲಿಹೈದರ ಜಿಲ್ಲಾ ಪಂಚಾಯತ್ ಸದಸ್ಯರಾದ ಹನುಮೇಶ ನಾಯಕ , ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ರಮೇಶ ನಾಯಕ ಹುಲಿಹೈದರ್,ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿದ್ದಪ್ಪ ನಿರಲೂಟಿ, ಗುರು ನಾಯಕ್ ಹುಲಿಹೈದರ, ನಾಗಪ್ಪ ಹುಗ್ಗಿ, ಗ್ರಾಮದ ಕಾಂಗ್ರೆಸ್ ಮುಖಂಡರಾದ ಅಮರಪ್ಪ ಗದ್ದಿ, ಹನುಮಂತ ಗೋಡಿ VSSN ಅಧ್ಯಕ್ಷರು, ಗೋಸಲಪ್ಪ ಗದ್ದಿ, ಹನುಮೇಶ ವರನಖೇಡ ಮಾಜಿ ಗ್ರಾ.ಪಂ ಉಪಾಧ್ಯಕ್ಷರು ಗ್ರಾ.ಪಂ ಸದಸ್ಯರು, ಅಶೋಕ ಜಾಡಿ, ಕರಿಯಪ್ಪ ಸೊಂಡಿ, ಪರಸಪ್ಪ ಜಾಡಿ, ರಾಮಣ್ಣ ವಕೀಲರು ಹಾಗೂ ಗ್ರಾಮದ ಜನರು ಹಾಗೂ ಸರ್ವಧರ್ಮದ ಇನ್ನಿತರರ ಮುಖಂಡರು ಉಪಸ್ಥಿತರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button