ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ : ಯುವ ಜನತೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಿ.

ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ: ಯುವ ಜನತೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಿ
ಕನಕಗಿರಿ ಪಟ್ಟಣದ ಪಂಪಣ್ಣ ಗುಗ್ಗಳ ಶೆಟ್ಟರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಅಪರಾಧ ತಡೆ ಮಾಸ ಚರಣೆ ಮಾದಕ ವ್ಯಾಸನಗಳಿಗೆ ಕಡಿವಾಣ ಹಾಕುವಲ್ಲಿ ಯುವಕರ ಪಾತ್ರ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಪಿ ಐ ಜಗದೀಶ್ ಕೆ ಜಿ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಕಾಲೇಜ್ ಮಾರ್ವಿನ್ ಡಿಸೋಜ ಅವರ ನೇತೃತ್ವದಲ್ಲಿ ನಡೆಯಿತು.
ನಂತರ ಮಾತನಾಡಿದ ಪಿಐ ಜಗದೀಶ್ ಕೆಜಿ ಕನಕಗಿರಿ ಯುವಜನತೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು’ ಎಂದು ಕನಕಗಿರಿ ಹೇಳಿದರು.
ಪಟ್ಟಣದ ಪಂಪಣ್ಣ ಶರಣಪ್ಪ ಗುಗ್ಗಳಶೇಟ್ರ ಕಾಲೇಜು ನಲ್ಲಿ
ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ರಾಷ್ಟ್ರಕವಿ ಕುವೆಂಪು ಹೇಳಿದಂತೆ ವಿಶ್ವ ಮಾನವ ಪರಿಕಲ್ಪನೆ ಜಾಗೃತಿಗೆ ಇಂಥ ವೇದಿಕೆ ಸಹಾಯಕವಾಗಲಿದೆ’ ಎಂದು ಅವರು ಹೇಳಿದರು.
‘ಶಾಲಾ ಕಾಲೇಜು ಹಂತದಲ್ಲಿ ಯುವ ಸಮೂಹ ಹೆಜ್ಜೆ ತಪ್ಪುವುದು ಸಹಜ. ಮಾದಕ ವ್ಯಸನಕ್ಕೆ ಬಲಿಯಾಗದೆ, ಕಾನೂನುಗಳ ಮಾಹಿತಿ ತಿಳಿದುಕೊಂಡು ಸಮಾಜದಲ್ಲಿ ನಡೆಯುವ ಮದ್ಯಪಾನ, ಧೂಮ್ರ ಪಾನ, ಗಾಂಜಾ, ಸೇವನೆ ಸೇರಿದಂತೆ ಸಮಾಜ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಆಗ ವ್ಯಕ್ತಿಗತ ಬೆಳವಣಿಗೆಯ ಜತೆಗೆ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಹಕಾರ ಮಾಡಿದಂತೆ ಆಗುತ್ತದೆ. ಪಾಲಕರ ಶಿಕ್ಷಕರು ಹಾಗೂ ಉಪನ್ಯಾಸಕರು ಶಾಲಾ–ಕಾಲೇಜುಗಳ ಘನತೆ ಹೆಚ್ಚಿಸಲು ತಾವು ಪಣ ತೊಡಬೇಕು’ ಎಂದು ಪಿ ಐ ಜಗದೀಶ್ ಸಲಹೆ ನೀಡಿದರು.
‘ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ’ ಎಂದು ಹೇಳಿದರು.
ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಯುವಕರು ಹಾಗೂ ಸಾರ್ವಜನಿಕರ ಸಹಕಾರವೂ ಮುಖ್ಯ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ ಮಾಹೆಯನ್ನು ಅಪರಾಧ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಮರ್ವಿನ್ ಡಿಸೋಜ್, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಎಚ್. ಸಿ. ಆಶಿಕಾ, ಲಲಿತಾ, ಪೋಲೀಸರಾದ ಗವಿಸಿದ್ದಯ್ಯ, ಬೈಲಪ್ಪ ಉಪಸ್ಥಿತರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




