ರಾಜಕೀಯ

ಮರಳಿ ಬಿಜೆಪಿಗೆ ಸೇರ್ಪಡೆಗೊಂಡ ಜಗದೀಶ್ ಶೆಟ್ಟರ್; ಕಾಂಗ್ರೆಸ್ ಮರ್ಮಾಘಾತ

ನವದೆಹಲಿ : ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ದೆಹಲಿಯಲ್ಲಿ ಅಮೀತ ಶಾ ನೇತೃತ್ವದಲ್ಲಿ ನಡೆದ ಮಾತುಕತೆ ನಂತರ ಜಗದೀಶ್ ಶೆಟ್ಟರ್ ಮತ್ತೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ..

ದೆಹಲಿಯ ಬಿಜೆಪಿಯ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯ್ಯೂರಪ್ಪ, ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

ಕೇಂದ್ರ ನಾಯಕರ ಸಮ್ಮುಖದಲ್ಲಿ ಜಗದೀಶ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮತ್ತೆ ವಾಪಸ್ ಬಿಜೆಪಿಗೆ ಸೇರಿದ್ದು ಸಂತಸ ತಂದಿದೆ. ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು.

ಬಿಜೆಪಿಗೆ ಬಲವರ್ಧನೆ ಮಾಡಬೇಕಿದೆ. ಪಕ್ಷ ಮತ್ತಷ್ಟು ಸದೃಡಗೊಳ್ಳಲು ಶ್ರಮಿಸುವೆ ಎಂದಿದ್ದಾರೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಧನ್ಯವಾದ ತಿಳಿಸುತ್ತೇನೆ ಎಂದರು.

Related Articles

Leave a Reply

Your email address will not be published. Required fields are marked *

Back to top button