ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ* ಕನಕಗಿರಿ
ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ*
ಕನಕಗಿರಿ: ಪಟ್ಟಣದಲ್ಲಿ ಜಿಲ್ಲಾಡಳಿತ ಹಾಗೂ ಜಿ.ಪಂ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಶನಿವಾರ ಅದ್ದೂರಿಯಾಗಿ ಜರುಗಿತು.
ಜಾಥಾ ಕಾರ್ಯಕ್ರಮವನ್ನು ತಹಶೀಲ್ದಾರ್ ವಿಶ್ವನಾಥ ಮುರುಡಿ ಹಾಗೂ ತಾ.ಪಂ ಇಓ ಚಂದ್ರಶೇಖರ್ ಕಂದಕೂರ್ ಅವರು ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಬೋಧಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ಪಟ್ಟಣದ ಅಯ್ಯಪ್ಪ ಸ್ವಾಮಿ ದೇಗುಲದಿಂದ ವಾಲ್ಮೀಕಿ ಸರ್ಕಲ್ ಮೂಲಕ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಜಾಥಾ ಕೊನೆಗೊಂಡಿತು.
ಜಾಥಾಗೆ ಮೆರಗು ತಂಡ ಕಲಾ ತಂಡಗಳು: ಇನ್ನೂ ಸಂವಿಧಾನ ಜಾಗೃತಿ ಜಾಥಾದ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿದ ಪಟ್ಟಣದ ಜನತೆ, ಮೊದಲಿಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಬೈಕ್ ಜಾಥಾ ಮಾಡಿ ಗಮನ ಸೆಳೆದರು. ಬಳಿಕ ಜಾಥಾ ಮೆರವಣಿಗೆಯಲ್ಲಿ ಕಲಾ ತಂಡಗಳಾದ ಡೊಳ್ಳು ಕುಣಿತ, ಮಹಿಳೆಯರ ಡೊಳ್ಳು ಕುಣಿತ ಸೇರಿದಂತೆ ವಿವಿಧ ವೇಷಭೂಷಣಗಳಲ್ಲಿ ಶಾಲಾ ಮಕ್ಕಳು ಹಾಗೂ ಸ್ತಬ್ಧ ಚಿತ್ರಗಳು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿದವು.
ಗ್ರಾಮೀಣ ಭಾಗದಲ್ಲಿ ಅದ್ದೂರಿ ಸ್ವಾಗತ: ಇನ್ನೂ ಚಿಕ್ಕಮಾದಿನಾಳ, ಮುಸಲಾಪುರ, ಬಸರಿಹಾಳ, ಗೌರಿಪುರ ಮತ್ತು ಹುಲಿಹೈದರ್ ಗ್ರಾಮಗಳಲ್ಲೂ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾ.ಪಂ ವತಿಯಿಂದ ಕುಂಭ ಮೇಳದೊಂದಿಗೆ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಬಳಿಕ ಗ್ರಾಮಸ್ಥರಿಗೆ ಸಂವಿಧಾನದ ಪ್ರಸ್ತಾವನೆಯನ್ನು ಗ್ರಾ.ಪಂ ಪಿಡಿಓರವರು ಬೋಧಿಸಿದರು.
, ಈ ವೇಳೆ ತಾಲೂಕ ಆಡಳಿತಾಧಿಕಾರಿ ವಿಶ್ವನಾಥ್ ಮುರುಡಿ ಹಾಗೂ ಸಿಬ್ಬಂದಿ ತಾಲೂಕ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ ಕಂದುಕುರ್ ಹಾಗೂ ಸಿಬ್ಬಂದಿ ಪೊಲೀಸ್ ಇಲಾಖೆಯ ಪಿ ಐ ಎಂಡಿ ಫೈಝೀಲ್ ಹಾಗೂ ಸಿಬ್ಬಂದಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ದತ್ತಾತ್ರೇಯ ಹೆಗಡೆ ಹಾಗೂ ಸಿಬ್ಬಂದಿ ಸಿ ಡಿ ಪಿ ಓ ವಿರುಪಾಕ್ಷಿ ಕಲ್ಲೂರ್ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಶಿಕ್ಷಣ ಇಲಾಖೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಅನಿಲ್ ಬಿಜ್ಹಾಳ್ ಹನುಮಂತ ಬಸನಗೌಡ ರಾಕೇಶ್ ಕಂಪ್ಲಿ ಕಂಠಿರಂಗ ನಾಯಕ್ ಮತ್ತು ಊರಿನ ಸರ್ವ ಸಮಾಜದ ಮುಖಂಡರು ಹಾಗೂ ಪ್ರಮುಖರಾದ ಕೆ ಗಂಗಾಧರ್ ಸ್ವಾಮಿ ಮಾಂತೇಶ್ ಸಜ್ಜನ್ ಬಿ ಕನಕಪ್ಪ ವೀರೇಶ್ ಸಮ್ಗಂಡಿ ಸುಭಾಷ್ ಕನಕಪ್ಪ ಮ್ಯಾಗಡಿ ಉಮೇಶ್ ಶಶಿಕುಮಾರ್ ಕೋರಿ ಮತ್ತು ವಿವಿಧ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಎಲ್ಲಾ ಶಾಲಾ ಶಿಕ್ಷಕರು ಮತ್ತು ಮಕ್ಕಳು ಊರಿನ ಗುರು ಹಿರಿಯರು ಅದ್ದೂರಿಯಾಗಿ ಸ್ವಾಗತಿಸಿದರು
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




