ಭಕ್ತಿ ಪೂರ್ವಕವಾಗಿ ಶ್ರೀ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ..ಕನಕಗಿರಿ

ಭಕ್ತಿ ಪೂರ್ವಕವಾಗಿ ಶ್ರೀ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ
ಕನಕಗಿರಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಮುಖ್ಯ ಅಧಿಕಾರಿ ದತ್ತಾತ್ರೇಯ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಸೇರಿ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಗಳಿಂದ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಪ್ರಕಾಶ್ ಅರೆರ್ ಅವರು 12 ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಡನಂಬಿಕೆಗಳ ಬಗ್ಗೆ, ವಿರೋಧ ವ್ಯಕ್ತಪಡಿಸಿರುತ್ತಾರೆ. ಅಲ್ಲದೇ, ಜಗಜ್ಯೋತಿ ಬಸವಣ್ಣನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ಯಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಉಲ್ಲೇಖಿತ ಆದೇಶದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು” ಘೋಷಿಸಲಾಗಿದೆ.
ನಂತರ ಈ ವೇಳೆ ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಪ್ರಕಾಶ್ ಅರೇರ್ ಪಾಮಣ್ಣ ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



