ಸಂಪಾದಕೀಯ
ಕುಡಿಯುವ ನೀರಿನ ಸಹಾಯವಾಣಿ ಕೇಂದ್ರ ಆರಂಭ.ಕನಕಗಿರಿ.

ಕುಡಿಯುವ ನೀರಿನ ಸಹಾಯವಾಣಿ ಕೇಂದ್ರ ಆರಂಭ
ಕನಕಗಿರಿ: ಕಳೆದ ಸಾಲಿನಲ್ಲಿ ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ ಆವರಿಸಿರುವ ಹಿನ್ನೆಲೆಯಲ್ಲಿ ಬರ ನಿರ್ವಹಣೆ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ತಾಲ್ಲೂಕಿನಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ದತ್ತಾತ್ರೇಯ ಹೇಗಡೆ ತಿಳಿಸಿದರು.
ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಮಂಗಳವಾರ ಸಹಾಯವಾಣಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜನರ ಅನುಕೂಲಕ್ಕಾಗಿ ಮೊಬೈಲ್ ನಂಬರ್ ನೀಡಲಾಗಿದೆ, ನೀರಿನ ಸಮಸ್ಯೆ ಎದುರಿಸುತ್ತಿರುವವ ಗ್ರಾಮಸ್ಥರು, ಹಾಗು ಸಾರ್ವಜನಿಕರು ಸಹಾಯವಾಣಿಗೆ ದೂರವಾಣಿ ಕರೆ ಮಾಡಿ ತಿಳಿಸಬೇಕೆಂದು ತಿಳಿಸಿದರು.
ದೂರವಾಣಿ ಸಂಖ್ಯೆ:-9686762208
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



