ಶ್ರೀ ಕನಕಾಚಲಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ. ಕನಕಗಿರಿ.

ಶ್ರೀ ಕನಕಾಚಲಪತಿ ದೇವಸ್ಥಾನದ 2024ನೇ ಸಾಲಿನ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ.
ಕನಕಗಿರಿ ಪಟ್ಟಣದ ಐತಿಹಾಸಿಕ ಸುಪ್ರಸಿದ್ಧವಾದ ಶ್ರೀ ಕನಕಾಚಲಪತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಜರುಗಲಿರುವುದರಿಂದ ದಿನಾಂಕ:23/03/2024ರಿಂದ 05/04/2024 ರ ವರೆಗೆ ದೇವಸ್ಥಾನದ ಜಾತ್ರಾ ಕಾರ್ಯಕ್ರಮಗಳು ನಡೆಯುವ ಕುರಿತಾಗಿ ತಾಲೂಕು ಆಡಳಿತ ಅಧಿಕಾರಿಗಳಾದ ವಿಶ್ವನಾಥ್ ಮುರುಡಿ ಸದರಿ ಜಾತ್ರಾ ಮಹೋತ್ಸವದ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದು. ಈ ಸಭೆಗೆ ಕನಕಗಿರಿ ತಾಲೂಕು ಹಾಗೂ ಗಂಗಾವತಿ ತಾಲೂಕಿನ ಎಲ್ಲಾ ತಾಲೂಕ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ತಹಶೀಲ್ದಾರ್ ವಿಶ್ವನಾಥ್ ಮುಲ್ಡಿ ಮಾತನಾಡಿ ಪಟ್ಟಣ ಪಂಚಾಯತಿ ಅಧಿಕಾರಿಗಳಾದ ದತ್ತಾತ್ರೇಯ ಹೆಗಡೆ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ್ ಕಂದುಕುರ್ ಜಾತ್ರೆಯಲ್ಲಿ ಪಾಲ್ಗೊಂಡ ಲಕ್ಷಾಂತರ ಭಕ್ತರಿಗೆ ನೀರಿನ ಹಾಗೂ ಊಟದ ಮತ್ತು ಮಹಿಳೆಯರಿಗೆ ಶೌಚಾಲಯದ ಸ್ನಾನದ ತೊಂದರೆ ಬಾರದಂತೆ ಹಾಗೂ ಸೂರ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿಶ್ವನಾಥ್ ಮುರುಡಿ ಗ್ರೇಡ್ 2 ತಹಸಿಲ್ದಾರ್ ವಿ ಎಚ್ ಹೊರಪೇಟೆ ತಾಲೂಕು ಉಪಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ್ ಕಂದುಕುರ್ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಾದ ದತ್ತಾತ್ರೇಯ ಹೆಗಡೆ ಪಿಎಸ್ಐ ಲೋಕೇಶ್ ಸಿಡಿಪಿಓ ವಿರೂಪಾಕ್ಷಪ್ಪ ಜೆಸ್ಕಾಂ ಅಧಿಕಾರಿ ಆನಂದ್ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಶ್ರೀರಾಮ್ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಲಿಂಗಯ್ಯ ಸ್ವಾಮಿ ವಿಜಯ್ ಗಡದ್ ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



