ಸುದ್ಧಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಕಾರ್ಯರೂಪಕ್ಕೆ ಬಂದಿವೆ….ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್

ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ಕಾರ್ಯರೂಪಕ್ಕೆ ಬಂದಿವೆ; ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್

ಕನಕಗಿರಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಂದು ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಕುರಿತು ಬ್ಲಾಕ್ ಕಾಂಗ್ರೆಸ್ ಕನಕಗಿರಿ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷರು ರೆಡ್ಡಿ ಶ್ರೀನಿವಾಸ, ಕೆ.ಗಂಗಾಧರಸ್ವಾಮಿ ಅಧ್ಯಕ್ಷರು ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಗ್ಯಾರಂಟಿ ಯೋಜನೆಯ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಶ್ರೀ ಹೆಚ್.ಎಂ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕಿನ ಸಮಿತಿಯ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರು ಸಭೆ ಆಯೋಜಿಸಲಾಗಿತ್ತು, ಸದರಿ ಸಭೆಯಲ್ಲಿ ಗ್ಯಾರಂಟಿ ಯೋಜನೆಯನ್ನು ಒಮ್ಮತದಿಂದ ರಾಜ್ಯದ ಜನರಿಗೆ ತಲುಪಿಸಲು ಪ್ರತಿಯೊಬ್ಬರ ಜವಾಬ್ದಾರಿ, ಕಳೆದ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳು ಅಧಿಕಾರಕ್ಕೆ ಬಂದ ಸ್ವಲ್ಪ ದಿನಗಳಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲಾಯಿತು, ಎಂದರು ಮತ್ತು ಅದರಂತೆ
ಲೋಕಸಭಾ ಚುನಾವಣೆಯಲ್ಲಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಒಮ್ಮತದಿಂದ ಕೆಲಸ ನಿರ್ವಹಿಸಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಕನಕಗಿರಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಗಂಗಾಧರ್ ಸ್ವಾಮಿ ರವಿ ಶಂಕರ್ ಪಾಟೀಲ ಅಧ್ಯಕ್ಷರು ನಗರ ಘಟಕ ಕನಕಗಿರಿ, ಹಜರತ್ ಹುಸೇನ್ ಅಧ್ಯಕ್ಷರು, ಗ್ಯಾರಂಟಿ ಯೋಜನೆಯ ಸಮಿತಿ ಕನಕಗಿರಿ, ನಾಗರಾಜ ಅರಳಿ, ಸೋಮನಾಥ ದೊಡ್ಡಮನಿ, ಹನುಮೇಶ್ ವಾಲೆಕಾರ್ ಹಾಗೂ ಕನಕಗಿರಿ ತಾಲೂಕಿನ ಗ್ಯಾರಂಟಿ ಸಮಿತಿಯ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button