ಸುದ್ಧಿ

ಪರಿಸರದ ಬಗ್ಗೆ ಜಾಗೃತಿ ಅವಶ್ಯ : ಪಿ ಐ .ಎಂ ಡಿ ಫೈಸಲ್

*ಪರಿಸರದ ಬಗ್ಗೆ ಜಾಗೃತಿ ಅವಶ್ಯ : ಪಿ ಐ .ಎಂ ಡಿ ಫೈಸಲ್*

ಕಾಡು ಬೆಳೆಸಿ ನಾಡು ಉಳಿಸಿ*

ಕನಕಗಿರಿ:ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಪಿ ಐ ಎಂಡಿ ಫೈಝಲ್ ಅವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು ಜೊತೆಗೆ ಪರಿಸರವನ್ನು ಉಳಿಸಿ, ಬೆಳೆಸುವ ಉದ್ದೇಶ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ ಎಂದು ಪಿ ಐ ಎಂ ಡಿ ಫೈಝಲ್ ಹೇಳಿದರು.

ಅವರು, ಕನಕಗಿರಿ ಪೊಲೀಸ್ ಠಾಣೆಯಲ್ಲಿ ಸುತ್ತಲು ಸಸಿಗಳನ್ನು ನೆಡುವ ಮೂಲಕ ಬುಧವಾರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಂತರ ಮಾತನಾಡಿದ ಪ್ರತಿ ವರ್ಷ ಹವಾಮಾನ ಬದಲಾವಣೆಯಿಂದ, ಜಾಗತಿಕ ತಾಪಮಾನ ಏರಿಕೆಯಿಂದ ಅರಣ್ಯ ನಾಶದವರೆಗೆ ತಕ್ಷಣದ ಸಮಸ್ಯೆಗಳನ್ನು ಗುರಿಯಾಗಿಟ್ಟುಕೊಂಡು ನಿರ್ದಿಷ್ಟ ಥೀಮ್ನೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇನ್ನಾದರೂ ಪರಿಸರ ಹಾಳು ಮಾಡುವುದನ್ನು ನಿಲ್ಲಿಸಿ, ಪ್ರಕೃತಿ ನಾಶಕ್ಕೆ ಕಡಿವಾಣ ಹಾಕಿ, ಹೆಚ್ಚು ಹೆಚ್ಚು ಗಿಡಗಳನ್ನು ಬೆಳೆಸಿ, ಮರಗಳನ್ನು ಉಳಿಸಿ. ಪ್ರಕೃತಿ ಮಾತೆಯ ಒಡಲು ಹಸಿರಾಗಿರುವಂತೆ ನೋಡಿಕೊಳ್ಳಿ ಎಂದು ಭೈರಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಎಎಸ್ಐ ಲಕ್ಕಪ್ಪ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಬೈರಪ್ಪ ,ಮುತ್ತಣ್ಣ,ಪರುಶುರಾಮ, ಶ್ರೀಕಾಂತ್,ಶೇಖರ್,ಮುತ್ತಪ್ಪ,ರವಿಚಂದ್ರ,ಕೊಟ್ರೇಶ್, ದೇವರಾಜ್,ಹಾಗೂ ನಿಂಗಮ್ಮ, ಪುನೀತಾ ಸೇರಿ ಇನ್ನು ಇತರ ಸಿಬ್ಬಂದಿ ಉಪಸ್ಥಿತರಿದ್ದರು.
~ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ~

Related Articles

Leave a Reply

Your email address will not be published. Required fields are marked *

Back to top button