ನಾಳೆ ದಿನಾಂಕ.30/08/2023 ರಂದು ತುರವಿಹಾಳ ಪಟ್ಟಣ ಪಂಚಾಯತ್ ಅಧ್ಯಕ್ಷ . ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ನಾಳೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆ
ತುರ್ವಿಹಾಳ : ಪಟ್ಟಣ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಅ.29 ಗುರುವಾರ ನಡೆಯಬೇಕಿದ್ದ, ಚುನಾವಣೆಯ ನಿಗದಿತ ಸಮಯಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ತಾಲೂಕು ದಂಡಾಧಿಕಾರಿ ತಿಳಿಸಿದ್ದಾರೆ.
ನಂತರ ಮಾತನಾಡಿದ ತಾಲೂಕ ದಂಡಾಧಿಕಾರಿಗಳಾದ ಅರುಣ್ ಕುಮಾರ ದೇಸಾಯಿ
ಪಟ್ಟಣದಲ್ಲಿ ಒಟ್ಟು 14 ಸದಸ್ಯರನ್ನು ಹೊಂದಿರುವ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿಗೆ ಮೀಸಲಾದ್ದು, ಇದರ ಪ್ರಕಾರ ಸ್ಪರ್ಧಿಸಲು ಇಚ್ಚಿಸುವ ಸದಸ್ಯರು ದಿನಾಂಕ 29-08-2024 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯ ವರೆಗೆ ನಿಗದಿತ ನಮೂನೆಯಲ್ಲಿ ಚುನಾವಣೆ ಅಧಿಕಾರಿ ತಹಸೀಲ್ದಾರರಿಗೆ ನಾಮಪತ್ರ ಸಲ್ಲಿಸಬೇಕಾಗಿತ್ತು ಯಾವುದೇ ನಾಮ ಪತ್ರ ಸಲ್ಲಿಸದೇ ಇರುವ ಕಾರಣ ಚುನಾವಣೆಯನ್ನ ನಾಳೆ 30-08-2024 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ನಿಗದಿತ ನಮೂನೆಯಲ್ಲಿ ಚುನಾವಣೆ ಅಧಿಕಾರಿ ತಹಸೀಲ್ದಾರರಿಗೆ ನಾಮಪತ್ರ ಸಲ್ಲಿಸಬೇಕು.ಮಧ್ಯಾಹ್ನ 1ಗಂಟೆಗೆ ಸಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1.30ಕ್ಕೆ ಸದಸ್ಯರ ಸಭೆಯಲ್ಲಿ ಕೈ ಎತ್ತುವ ಮೂಲಕ ಮತದಾನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ವರದಿ: ವಿಜಯ್ ಕುಮಾರ್ ಹಿರೇಮಠ



