ಸುದ್ಧಿ

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಯಾದಗಿರಿ ಜಿಲ್ಲೆ.

ಯಾದಗಿರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ನರೇಗಾ ಕಾರ್ಮಿಕರ ಮುಷ್ಕರ.

ದಿನಾಂಕ 6 ಡಿಸೆಂಬರ್ 2024ರಂದು ನರೇಗಾ ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಕೆಗಾಗಿ ಕೈಗೊಂಡಿದ್ದರು. ನರೇಗಾ ಕಾನೂನು ಅಡಿಯಲ್ಲಿ ಗ್ರಾಮೀಣ ಭಾಗದ ಕಾರ್ಮಿಕರಿಗೆ ನೂರು ದಿನಗಳ ಕೆಲಸದ ಗ್ಯಾರಂಟಿಯನ್ನು ನೀಡಿರುತ್ತದೆ. ಈ ಕಾನೂನು ಅಡಿಯಲ್ಲಿ ಕೋಟ್ಯಾಂತರ ಕಾರ್ಮಿಕರು ಕೆಲಸ ಮಾಡಿ ತಮ್ಮ ಸಂಕಷ್ಟದ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಹಾಗೂ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ನಿಲ್ಲಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಸರಕಾರದ ಹೊಸ ಹೊಸ ನೀತಿಗಳ ಬದಲಾವಣೆಯಿಂದಾಗಿ ಕಾರ್ಮಿಕರಿಗೆ ಸರಿಯಾಗಿ ನೂರು ದಿನಗಳ ಖಾತ್ರಿ ಕೆಲಸ ಸಿಗುತ್ತಿಲ್ಲ.

ಕಾರ್ಮಿಕರ ಬೇಡಿಕೆಗಳು ಏನಂದರೆ…..

ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಬಜೆಟಿನಲ್ಲಿ ಮೀಸಲಿಡಬೇಕಾದ ಹಣ ಕೇಂದ್ರ ಸರ್ಕಾರ ಪ್ರತಿ ವರ್ಷ ಕಡಿಮೆ ಮಾಡುತ್ತಾ ಬರುತ್ತಿದೆ. ಕಾರ್ಮಿಕರಿಗೆ ನೂರು ದಿನಗಳ ಕೆಲಸದ ಹಕ್ಕು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ಇದರಿಂದ ದುಡಿದ ಕಾರ್ಮಿಕರಿಗೆ ಕೂಲಿ ಪಾವತಿ ಆಗುತ್ತಿಲ್ಲ. ಕೇಂದ್ರ ಸರ್ಕಾರ ತಮ್ಮ ಬಜೆಟ್ ನಲ್ಲಿ 2 ಲಕ್ಷ ಕೋಟಿ ಹಣ ಮೀಸಲಿಡಬೇಕು.
2) ಕುಟುಂಬಕ್ಕೆ ನೂರು ದಿನಗಳ ಕೆಲಸದ ಗ್ಯಾರಂಟಿಯನ್ನು 200 ದಿನಗಳಿಗೆ ಹೆಚ್ಚಿಸಬೇಕು.
3) ಕೆಲಸ ಮಾಡುವ ಸಂದರ್ಭದಲ್ಲಿ ಕಾರ್ಮಿಕ ಮರಣ ಹೊಂದಿದರೆ ಅವರ ಅವಲಂಬಿ ಕುಟುಂಬ ಸದಸ್ಯರಿಗೆ ರೂ. 5 ಲಕ್ಷ ಹಣ ಪರಿಹಾರ ನೀಡಬೇಕು.

ಈ ಬೇಡಿಕೆಗಳನ್ನು ಇಟ್ಟುಕೊಂಡು ಎಲ್ಲಾ ರಾಜ್ಯದ ಕಾರ್ಮಿಕರು ಡಿಸೆಂಬರ್ 5 ರಿಂದ ದೆಹಲಿಯ ಜಂತರ್ ಮಂತರ್ ಸ್ಟೇಡಿಯಂನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಅವರಿಗೆ ಬೆಂಬಲ ನೀಡುವ ಸಲುವಾಗಿ ಯಾದಗಿರಿ ಜಿಲ್ಲೆಯ ಕಾರ್ಮಿಕರು ಯಾದಗಿರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ದಿನಾಂಕ ಡಿಸೆಂಬರ್ 6 2018 ರಂದು ಕಾರ್ಮಿಕರು ಪ್ರತಿಭಟನೆ ನಡೆಸಿದರು. ಪ್ರಜಾಶ್ರೀ ವರದಿಗಾರರು ಯಾದಗಿರಿ.

Related Articles

Leave a Reply

Your email address will not be published. Required fields are marked *

Back to top button