ನಾಗಮೋಹನ್‌ದಾಸ್ ಆಯೋಗವು ನೀಡಿರುವ ವರದಿಯು ಅವೈಜ್ಞಾನಿಕ ದೋಷಪೂರಿತ – ಶ್ರೀ ಶ್ರೀ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ. 25.03.2026ರಂದು ಬೃಹತ್ ಪ್ರತಿಭಟನಾ ಸಮಾವೇಶ.

ನಾಗಮೋಹನ್‌ದಾಸ್ ಆಯೋಗವು ನೀಡಿರುವ ವರದಿಯು ಅವೈಜ್ಞಾನಿಕ ದೋಷಪೂರಿತ – ಶ್ರೀ ಶ್ರೀ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ 25.03.2026ರಂದು ಬೃಹತ್ ಪ್ರತಿಭಟನಾ ಸಮಾವೇಶ.
ಬೆಂಗಳೂರು. ನಾಗಮೋಹನ್‌ದಾಸ್ ಆಯೋಗವು ನೀಡಿರುವ ವರದಿಯು ಅವೈಜ್ಞಾನಿಕ ದೋಷಪೂರಿತ – ಶ್ರೀ ಶ್ರೀ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ 25.03.2026ರಂದು ಬೃಹತ್ ಪ್ರತಿಭಟನಾ ಸಮಾವೇಶ ನಿರ್ವಹಿಸಲಾಗುವುದೆಂದು ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸ್ವಾಮಿ ತಿಳಿಸಿದರು . ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿಯು ದಿನಾಂಕ: 12.03.2025ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಛಲವಾದಿ ಮಹಾ ಸಭಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಒಳಮೀಸಲಾತಿ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಗಿದ್ದು ಒಳಮೀಸಲಾತಿ ಕುರಿತು ನ್ಯಾಯಾಲಯದ ತಡೆಯಾಜ್ಞೆ ಇರುವುದು ಹಾಗೂ ರೋಸ್ಟರ್ ಬಿಂದುಗಳ ವಿಷಯದಲ್ಲಿ ಉಂಟಾಗಿರುವ ಗೊಂದಲಗಳು ಮತ್ತು ಶೇಕಡ 56ರಮ್ಮ ಮೀಸಲಾತಿ ನೀಡುವ ಬಗ್ಗೆ, ಕೇಂದ್ರ ಸರ್ಕಾರ ಒಪ್ಪಿಗೆ ನೀಡುವವರೆವಿಗೆ ಒಳಮೀಸಲಾತಿ ರಹಿತ ಶೇಕಡ 15+3 ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿ ದಿನಾಂಕ: 27.02.2026ರಂದು ಹೊರಡಿಸಿರುವ ಆದೇಶವನ್ನು ಬಲಗೈ ಸಮುದಾಯವು ಸ್ವಾಗತಿಸಿರುತ್ತದೆ.
ಅಲ್ಲದೇ, ಒಳಮೀಸಲಾತಿಯು 101 ಜಾತಿಗಳಿಗೆ ಸಮಾನವಾಗಿ ಹಂಚಿಕೆಯಾಗುವ ಪ್ರಮಾಣ ಹೆಚ್ಚಾಗಬೇಕಾದ್ದುದ್ದು. ದೃಷ್ಟಿಯಿಂದ ಮೀಸಲಾತಿ ಅನಿವಾರ್ಯವಾಗಿರುತ್ತದೆ ಆದರೆ, 101 ಜಾತಿಗಳ ಪೈಕಿ 01 ಜಾತಿಯ ಒತ್ತಡಕ್ಕೆ ಸರ್ಕಾರ ಮಣಿದು ಶೇಕಡ 15+3ರ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಮುಂದಾದರೆ, ಬಲಗೈ ಸಮುದಾಯಗಳ ಪ್ರತಿರೋಧವನ್ನು ರಾಜ್ಯ ಸರ್ಕಾರವು ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ, ತಿಳಿಸಲಾಗುತ್ತಿದೆ ಹಾಗೂ ಬಲಗೈ ಸಮುದಾಯದ ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟವು ದಿನಾಂಕ: 25.03.2026ರಂದು ಬೆಂಗಳೂರಿನ ಸ್ವಾತಂತ್ರೋತ್ಸವ ಉದ್ಯಾನವನದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ. ಕರ್ನಾಟಕ
ಅವೈಜ್ಞಾನಿಕ, ಅಪೂರ್ಣ, ದೋಷವೂರಿತ ಹಾಗೂ ಪಕ್ಷವಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸುವುದು. ……. ಅವೈಜ್ಞಾನಿಕ, ಆಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸುವುದು
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿ ಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡುವುದು, ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳುವುದು.
. ರಾಜ್ಯ ಸರ್ಕಾರವು ದಿನಾಂಕ: 03.09.2025ರಂದು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯುವುದು.
ಸಮಾಜ ಕಲ್ಯಾಣ ಇಲಾಖೆಯ ಸುತ್ತೋಲೆ ಸಂಖ್ಯೆ ಸಕಇ/08/ಎಸ್ಎಲ್ ಪಿ/2024 (ಭಾಗ-5) ದಿನಾಂಕ: 08.10.2025ರ ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ಪ್ರವರ್ಗ A. B ಮತ್ತು “ ಎಂದು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸುವುದು.
ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಸೂಕ್ತ ಆದೇಶ ಹೊರಡಿಸುವುದು.
ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರೆ ಸೌಲಭ್ಯ ಪಡೆಯಲು ಅಧಿಸೂಚನೆ ಹೊರಡಿಸುವುದು.
ಚಿತ್ರದುರ್ಗ ಜಿಲ್ಲೆಯಲ್ಲಿ ಹೊಲಯ ಸಮುದಾಯ ಕೇವಲ 223 ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿ ದಾಖಲಿಸಿರುವುದನ್ನು ಮರು ಪರಿಶೀಲಿಸಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡುವುದು.
ಮುಂತಾದವರು ಉಪಸ್ಥಿತರಿದ್ದರು.
ಶ್ರೀ ಶ್ರೀ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ
ಸಿದ್ದಯ್ಯ, ಬಿ.ಎ.ಎಸ್. (ನಿವೃತ್ತ)
ಸಂಪತ್ ರಾಜ್
ಪರುಷೋತ್ತಮ್
ನಾಗೇಶ್ ರಾವ್
ಶ್ರೀಮತಿ ವಾಣಿ ಶಿವರಾಂ , ವರದಿ. ಮಂಜುಳಾ ರೆಡ್ಡಿ.




