ಸಂಪಾದಕೀಯ

ಶಿವಮೊಗ್ಗ ಹೈಕೋರ್ಟ್ ಪೀಠ ಹೋರಾಟಕ್ಕೆ – ಕೆ ಎಸ್ ಈಶ್ವರಪ್ಪ ಬೆಂಬಲ.

ಶಿವಮೊಗ್ಗ ಹೈಕೋರ್ಟ್ ಪೀಠ ಹೋರಾಟಕ್ಕೆ – ಕೆ ಎಸ್ ಈಶ್ವರಪ್ಪ ಬೆಂಬಲ

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘ ನಡೆಸುತ್ತಿರುವ ಹೋರಾಟಕ್ಕೆ ವಿವಿಧ ರಾಜಕೀಯ ನಾಯಕರು ಹಾಗೂ ಸಂಘಟನೆಗಳು ಬೆಂಬಲ ಸೂಚಿಸಿವೆ.

ನಗರದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ರಾಷ್ಟ್ರಭಕ್ತರ ಬಳಗದ ಮುಖ್ಯಸ್ಥರು, ಕರ್ನಾಟಕದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿವಮೊಗ್ಗದ ಮಾಜಿ ಶಾಸಕರಾದ K. S. Eshwarappa ಅವರ ನೇತೃತ್ವದಲ್ಲಿಯೂ ವಕೀಲರ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು. ಕೆ.ಈ. ಕಾಂತೇಶ್, ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ವಿಶ್ವಾಸ್ ಸೇರಿದಂತೆ ನೂರಾರು ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ವಕೀಲರ ಬೇಡಿಕೆಗೆ ತಮ್ಮ ಬೆಂಬಲ ಘೋಷಿಸಿದರು.

ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ ನೀಡಬೇಕಾದ ಅಗತ್ಯತೆಯನ್ನು ವಿವರಿಸಿ, ಮಲೆನಾಡು ಭಾಗದ ಜನರಿಗೆ ನ್ಯಾಯಾಂಗ ಸೇವೆಗಳನ್ನು ಸುಲಭ ಹಾಗೂ ವೇಗವಾಗಿ ಒದಗಿಸಲು ಇದು ಅತ್ಯಂತ ಅವಶ್ಯಕ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ವಕೀಲರು, ವಕೀಲರ ಸಂಘದ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕೃಪೆ.

Related Articles

Leave a Reply

Your email address will not be published. Required fields are marked *

Back to top button