ಸಂಪಾದಕೀಯ

ಡಾ ಡಿ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು – ಕೆ.ಆರ್. ರಾಚಯ್ಯ ಬೆಂಗಳೂರು.

ಡಾ ಡಿ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡ ಬೇಕು – ಕೆ.ಆರ್. ರಾಚಯ್ಯ* ಬೆಂಗಳೂರು: ಡಾ. ಡಿ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡ ಬೇಕು ಎಂದು , ಕರ್ನಾಟಕ ರಾಜ್ಯ ಅದಿಜಾಂಬವ ಕ್ಷೇಮಾಭಿವೃದ್ಧಿ ಸಂಘವು ಇಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸರ್ಕಾರ ವನ್ನು ಡಿಮಾಂಡ್ ಮಾಡಿದರು., ಸಮಾಜದ ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಆಗ್ರಹಿಸಿತು.
ಸಂಘದ ರಾಜ್ಯಾಧ್ಯಕ್ಷ ಕೆ. ಆರ್. ರಾಜಯ್ಯ ಮಾತನಾಡಿ, ಡಾ. ಡಿ. ತಿಮ್ಮಯ್ಯ ಅವರು ಹಲವು ದಶಕಗಳಿಂದ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಮಾಜದ ಧ್ವನಿಯಾಗಿ ನಿರಂತರವಾಗಿ ಕೆಲಸ ಮಾಡುತ್ತಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಪರಿಶಿಷ್ಟ ಜಾತಿಯ ವಂಚಿತ ಸಮುದಾಯಗಳಿಗೆ ಮತ್ತಷ್ಟು ನ್ಯಾಯ ದೊರೆಯಲಿದೆ ಎಂದು ಹೇಳಿದರು.
ಅದಿಜಾಂಬವ ಸೇರಿದಂತೆ ಪರಿಶಿಷ್ಟ ಜಾತಿಯ ಅತ್ಯಂತ ಹಿಂದುಳಿದ ಸಮುದಾಯಗಳ ಪರವಾಗಿ ಡಾ. ಡಿ. ತಿಮ್ಮಯ್ಯ ಅವರು ನಿರಂತರವಾಗಿ ಹೋರಾಟ ಮಾಡಿದ್ದಾರೆಂದರು
ಇದೆ ಸಂಧರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಡತೊರೆ ಎಂ ನಿಂಗರಾಜ್ ರವರು ಮಾತನಾಡಿ ಪದಾಧಿಕಾರಿಗಳು, ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕುವ ನಿಟ್ಟಿನಲ್ಲಿ ಒಳಮೀಸಲಾತಿ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಡಾ. ಬಿ. ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ಅನುಗುಣವಾಗಿ ಸಮಾನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಒಳಮೀಸಲಾತಿ ಜಾರಿಗೊಂಡಿದ್ದು, ಇದರಿಂದ ವಂಚಿತ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ನ್ಯಾಯಯುತ ಅವಕಾಶಗಳು ದೊರೆಯಲಿವೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಟಿ ಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಡೆತೊರೆ ಎಂ. ನಿಂಗರಾಜ್ , ಉಪಾಧ್ಯಕ್ಷ ಎಂ. ಶಿವಮೂರ್ತಿ, ಸಂಘಟನಾ ಕಾರ್ಯದರ್ಶಿ ಡಿ. ಕುಮಾರ್ ಹಾಗೂ ಸಹಾಯಕ ಕಾರ್ಯದರ್ಶಿ ವಿಜಯಕುಮಾರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ. ಮಂಜುಳಾ ರೆಡ್ಡಿ

Related Articles

Leave a Reply

Your email address will not be published. Required fields are marked *

Back to top button