ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು – ಜಿ. ಮುದಿ ಅರಸನ್ ಡಿಮ್ಯಾಂಡ್

ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು – ಜಿ. ಮುದಿ ಅರಸನ್ ಡಿಮ್ಯಾಂಡ್
ಬೆಂಗಳೂರು. *ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು – ಜಿ. ಮುದಿ ಅರಸನ್ ಅವರು ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಡಿಮ್ಯಾಂಡ್ ಮಾಡಿದರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರ ಮಂತ್ರಿಮಂಡಲದಲ್ಲಿ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೇಂದ್ರದ ಮತ್ತು ರಾಜ್ಯದ ಕಾಂಗ್ರೆಸ್ ವರಿಷ್ಠ ನಾಯಕರನ್ನು ಆಗ್ರಹಿಸಿದರು.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರು ಶ್ರೀ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ವಸತಿ, ವಕ್ಫ್, ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಬಡವರ ಕಲ್ಯಾಣಕ್ಕಾಗಿ ಉತ್ತಮ ಕೆಲಸ ಮಾಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಜಾತಿಯ ಬಡವರಿಗೆ ಲಕ್ಷಾಂತರ ಮನೆಗಳನ್ನು ಸರ್ಕಾರದಿಂದ ನಿರ್ಮಿಸಿಕೊಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಮತ್ತು ಕಾಗವಾಡ ತಾಲ್ಲೂಕಿನ ಗ್ರಾಮಗಳಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ನೆರೆಸಂತ್ರಸ್ಥರಿಗೆ ಮನೆಗಳನ್ನು ಕಟ್ಟಿಕೊಡುವ ಕಾರ್ಯವನ್ನು ಮುಂದುವರೆಸಿದ್ದಾರೆ. ಇಂಥಹ ಜನಪ್ರಿಯ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೇಂದ್ರ ಮತ್ತು ರಾಜ್ಯ ವರಿಷ್ಠ ಕಾಂಗ್ರೆಸ್ ನಾಯಕರಿಗೆ ಮಾಧ್ಯಮದ ಮೂಲಕ ಒತ್ತಾಯಮಾಡುತ್ತಿದ್ದೇವೆಂದು ತಿಳಿಸಿದರು.
ಇದಕ್ಕೆ ಸಂಬಂಧಿಸಿದಂತೆ ನಾಳೆ ಇಲ್ಲವೆ ಮುಂದಿನ ವಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರಿಗೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರಿಗೆ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ರವರಿಗೆ ಮತ್ತು ಮಾನ್ಯ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮರ್ ರವರಿಗೆ ಮನವಿ ನೀಡುವುದಾಗಿ ಮಾಹಿತಿ ತಿಳಿಸಿರುತ್ತಾರೆ.
ಒಂದು ವೇಳೆ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ ಹೋದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು . ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) (ಸಂಯೋಜಕ) ಬೆಂಗಳೂರು ನಗರ ಸಮಿತಿ ವತಿಯಿಂದ ಬೆಂಗಳೂರು ನಗರ ಅಧ್ಯಕ್ಷರಾದ ಜಿ ಮದಿಯರಸನ್ , ರಾಜ್ಯ ಸಂಚಾಲಕರಾದ ಎನ್ ಶಂಕರ್ , ಜೇಮ್ಸ್ , ಮಹೇಂದ್ರನ್, ಗೋಪಿನಾಥ್, ರಫೀಕ್ ಪಾಷ, ಬಾಬು, ರಂಜಿತ್, ಜಾನ್ ಮುಂತಾದವರು ಪತ್ರಿಕಾ ಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು . ವರದಿ. ಮಂಜುಳಾ ರೆಡ್ಡಿ.




