ಕನಕಗಿರಿ ತಾಲೂಕಿನಲ್ಲಿ ಇಸ್ಪೇಟ್ ಜೋರು: ಪೊಲೀಸರ ನಿರ್ಲಕ್ಷ್ಯ ಆರೋಪ, ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಕನಕಗಿರಿ: ಕನಕಗಿರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಇಸ್ಪೇಟ್ (ಜೂಜಾಟ) ಚಟುವಟಿಕೆಗಳು ದಿನದಿಂದ ದಿನಕ್ಕೆ
ಕನಕಗಿರಿ ತಾಲೂಕಿನಲ್ಲಿ ಇಸ್ಪೇಟ್ ಜೋರು: ಪೊಲೀಸರ ನಿರ್ಲಕ್ಷ್ಯ ಆರೋಪ, ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಕನಕಗಿರಿ: ಕನಕಗಿರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಇಸ್ಪೇಟ್ (ಜೂಜಾಟ) ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹ ಅಕ್ರಮ ಚಟುವಟಿಕೆಗಳಿಗೆ ಉತ್ತೇಜನ ಸಿಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ತಾಲೂಕಿನ ಹಲವು ಭಾಗಗಳಲ್ಲಿ ಬಹಿರಂಗವಾಗಿ ಇಸ್ಪೇಟ್ ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದರಿಂದ ಯುವಕರು ಜೂಜಿನ ಚಟಕ್ಕೆ ಬಲಿಯಾಗುತ್ತಿದ್ದು, ಕುಟುಂಬಗಳ ಆರ್ಥಿಕ ಹಾಗೂ ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.
ಅಕ್ರಮ ಜೂಜಾಟದಲ್ಲಿ ತೊಡಗಿರುವವರ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ದಾಳಿ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಇಂತಹ ಚಟುವಟಿಕೆಗಳಿಗೆ ಬೆಂಬಲ ನೀಡುವವರ ಮೇಲೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕನಕಗಿರಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ನಿರಂತರ ನಿಗಾ ವಹಿಸಿ, ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




